ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಆಡಳಿತಾತ್ಮಕ ಬದಲಾವಣೆಗಳು ಆರಂಭಗೊಂಡಿವೆ. ಅದರ ಭಾಗವಾಗಿ ಮುಖ್ಯಮಂತ್ರಿಗಳ ಕಚೇರಿಯ ನಾಮಫಲಕವನ್ನು ಬದಲಾಯಿಸಲಾಗಿದೆ.
ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕವನ್ನು ತೆರವುಗೊಳಿಸಿ, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರಿನ ನಾಮಫಲಕವನ್ನು ಅಳವಡಿಸಲಾಗಿದೆ. ಪ್ರಮಾಣವಚನ ಸ್ವೀಕಾರದ ಬಳಿಕವೇ ಈ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಕಚೇರಿ ಹೊಸ ಆಡಳಿತಕ್ಕೆ ಸಜ್ಜಾಗಿದೆ.
ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ಮುಂಭಾಗದಲ್ಲಿ ಡಿ.ಕೆ. ಶಿವಕುಮಾರ್ ಅವರ ಹೆಸರಿನ ಫಲಕ ಅಳವಡಿಕೆಯಾಗಿರುವುದು ಹೊಸ ಸರ್ಕಾರದ ಅಧಿಕೃತ ಆರಂಭದ ಸಂಕೇತವಾಗಿದೆ.
ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಡಿಕೆ ಶಿವಕುಮಾರ್ ಅವರು ಆಡಳಿತಾತ್ಮಕ ಚಟುವಟಿಕೆಗಳಿಗೆ ಚಾಲನೆ ನೀಡಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ವಿವಿಧ ಮಹತ್ವದ ನಿರ್ಧಾರಗಳು ಇದೇ ಕಚೇರಿಯಿಂದ ಹೊರಬೀಳಲಿವೆ.



