ನೆಲಮಂಗಲ: ಕುಣಿಗಲ್ ಬೈಪಾಸ್ ಬಳಿ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ.
ಆ್ಯಂಬುಲೆನ್ಸ್ ಹಾಸನ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಮಾರ್ಗಮಧ್ಯೆ ಈ ಅಪಘಾತ ಸಂಭವಿಸಿದೆ.
ಅದೃಷ್ಟವಶಾತ್ ಅಪಘಾತದಲ್ಲಿ ಆ್ಯಂಬುಲೆನ್ಸ್‌ನಲ್ಲಿದ್ದ ರೋಗಿ ಹಾಗೂ ಚಾಲಕ ಸೇರಿ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯ ತೀವ್ರತೆ ಗಮನಿಸಿದರೆ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅಪಘಾತದ ಬಳಿಕ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ, ಆ್ಯಂಬುಲೆನ್ಸ್‌ನಲ್ಲಿದ್ದ ರೋಗಿಯನ್ನು ಸುರಕ್ಷಿತವಾಗಿ ಬೇರೆ ವಾಹನಕ್ಕೆ ಸ್ಥಳಾಂತರಿಸಿ ಮುಂದಿನ ಚಿಕಿತ್ಸೆಗಾಗಿ ಕಳುಹಿಸಿದ್ದಾರೆ. ಆ್ಯಂಬುಲೆನ್ಸ್ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಕ್ಯಾಂಟರ್‌ಗೂ ಅಲ್ಪ ಪ್ರಮಾಣದ ಹಾನಿಯಾಗಿದೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



