HomeCrime Newsಚಾಮರಾಜನಗರ-ಚಿಕ್ಕಬಳ್ಳಾಪುರದಲ್ಲಿ ರಸ್ತೆ ದುರಂತ: ವೃದ್ಧ ದಂಪತಿ ಸೇರಿ 4 ಮಂದಿ ಬಲಿ

ಚಾಮರಾಜನಗರ-ಚಿಕ್ಕಬಳ್ಳಾಪುರದಲ್ಲಿ ರಸ್ತೆ ದುರಂತ: ವೃದ್ಧ ದಂಪತಿ ಸೇರಿ 4 ಮಂದಿ ಬಲಿ

For Dai;y Updates Join Our whatsapp Group

Spread the love

ಬೆಂಗಳೂರು: ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳು ನಾಲ್ವರು ಜೀವಗಳನ್ನು ಬಲಿ ಪಡೆದಿವೆ. ಅಪಘಾತಗಳಲ್ಲಿ 7 ತಿಂಗಳ ಹಸುಗೂಸು ಹಾಗೂ ವೃದ್ಧ ದಂಪತಿ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ದೊಡ್ಡಮೂಡಹಳ್ಳಿ ಕ್ರಾಸ್ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮುಬಾರಕ್ (70) ಮತ್ತು 7 ತಿಂಗಳ ಮಗು ಸಾವನ್ನಪ್ಪಿವೆ. ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೊಂದು ದುರಂತ ಚಿಕ್ಕಬಳ್ಳಾಪುರ ಜಿಲ್ಲೆಯ ಸಾದಲಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ಆಂಧ್ರಪ್ರದೇಶ ಸಾರಿಗೆ ಸಂಸ್ಥೆಯ ಬಸ್ ಮತ್ತು ಟಿವಿಎಸ್ ಎಕ್ಸೇಲ್ ನಡುವೆ ಸಂಭವಿಸಿದ ಅಪಘಾತದಲ್ಲಿ ಲಕ್ಷ್ಮಣ್ (75) ಹಾಗೂ ಅವರ ಪತ್ನಿ ರತ್ನಮ್ಮ (70) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ದ್ವಿಚಕ್ರ ವಾಹನ ಸವಾರರು ದಿಢೀರ್ ರಸ್ತೆ ತಿರುವು ಪಡೆದಿರುವುದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಮೃತ ದಂಪತಿ ಶಿಡ್ಲಘಟ್ಟ ತಾಲ್ಲೂಕಿನ ತಿರುಕಾಚೇನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದರು.

ಎರಡೂ ಘಟನೆಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!