HomeBidarಮಳೆ ಅನಾಹುತಕ್ಕೆ 8 ವರ್ಷದ ಬಾಲಕ ಬಲಿ: ನೆಲಕ್ಕೆ ಬಿದ್ದ ವಿದ್ಯುತ್ ತಂತಿ ತಗುಲಿ ದಾರುಣ...

ಮಳೆ ಅನಾಹುತಕ್ಕೆ 8 ವರ್ಷದ ಬಾಲಕ ಬಲಿ: ನೆಲಕ್ಕೆ ಬಿದ್ದ ವಿದ್ಯುತ್ ತಂತಿ ತಗುಲಿ ದಾರುಣ ಸಾವು

For Dai;y Updates Join Our whatsapp Group

Spread the love

ಬೀದರ್: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ ಮತ್ತೊಂದು ಅಮಾಯಕ ಜೀವವನ್ನು ಬಲಿ ಪಡೆದಿದೆ. ಹುಲಸೂರು ಪಟ್ಟಣದಲ್ಲಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 8 ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ಬಾಲಕನನ್ನು ಅಲಿ ಮೊಮಿನ್ (8) ಎಂದು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿದ ಪರಿಣಾಮ ವಿದ್ಯುತ್ ಕಂಬದಿಂದ ಮನೆಗೆ ನೀಡಲಾಗಿದ್ದ ಸಂಪರ್ಕ ತಂತಿ ತುಂಡಾಗಿ ನೆಲಕ್ಕೆ ಬಿದ್ದಿತ್ತು.

ಘಟನೆಯ ವೇಳೆ ಹೊರಗಡೆ ಆಟವಾಡುತ್ತಿದ್ದ ಅಲಿ ಮೊಮಿನ್, ನೆಲದಲ್ಲಿದ್ದ ವಿದ್ಯುತ್ ತಂತಿಯನ್ನು ಕೈಯಿಂದ ಮುಟ್ಟಿದ್ದಾನೆ. ತಕ್ಷಣವೇ ಭಾರೀ ಪ್ರಮಾಣದ ವಿದ್ಯುತ್ ಪ್ರವಹಿಸಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಥಳೀಯರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇತ್ತ ಜೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ ಎಂದು ಆರೋಪಿಸಿರುವ ಕುಟುಂಬಸ್ಥರು ಹಾಗೂ ಸ್ಥಳೀಯರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಯಿಂದ ವಿದ್ಯುತ್ ತಂತಿ ಕಟ್ ಆಗಿ ನೆಲಕ್ಕೆ ಬಿದ್ದಿದ್ದರೂ ಅದನ್ನು ತೆರವುಗೊಳಿಸಲು ಅಥವಾ ಸುರಕ್ಷತಾ ಕ್ರಮ ಕೈಗೊಳ್ಳಲು ಇಲಾಖೆ ವಿಫಲವಾಗಿದೆ ಎಂದು ದೂರಿದ್ದಾರೆ.

ಈ ಘಟನೆ ಹುಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!