HomeKarnataka Newsಖಾತೆ ಹಂಚಿಕೆಯಾದ ಬೆನ್ನಲ್ಲೇ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಆರೋಗ್ಯ ಸಚಿವ ಯು.ಟಿ. ಖಾದರ್!

ಖಾತೆ ಹಂಚಿಕೆಯಾದ ಬೆನ್ನಲ್ಲೇ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಆರೋಗ್ಯ ಸಚಿವ ಯು.ಟಿ. ಖಾದರ್!

For Dai;y Updates Join Our whatsapp Group

Spread the love

ಬೆಂಗಳೂರು: ಆರೋಗ್ಯ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಜಯನಗರದ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಸ್ವಚ್ಛತೆ, ರೋಗಿಗಳಿಗೆ ಸಿಗುತ್ತಿರುವ ಚಿಕಿತ್ಸೆ ಹಾಗೂ ಸಿಬ್ಬಂದಿಯ ಕಾರ್ಯನಿರ್ವಹಣೆಯ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು. ಈ ವೇಳೆ ರಾತ್ರಿ ಪಾಳಿಯಲ್ಲಿ ಸಿಬ್ಬಂದಿ ಕೊರತೆ ಇರುವುದು ಹಾಗೂ ಕೆಲ ವೈದ್ಯರು ಕರ್ತವ್ಯಕ್ಕೆ ಗೈರಾಗಿರುವುದು ಸಚಿವರ ಗಮನಕ್ಕೆ ಬಂದಿದೆ.

ಇದರಿಂದ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಗೈರಾಗಿದ್ದ ವೈದ್ಯರಿಗೆ ಎಚ್ಚರಿಕೆ ನೀಡುವುದಾಗಿ ತಿಳಿಸಿದರು. ಆಸ್ಪತ್ರೆಯ ನೈಜ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಉದ್ದೇಶದಿಂದಲೇ ಈ ಹೊತ್ತಲ್ಲಿ ಭೇಟಿ ನೀಡಿದ್ದಾಗಿ ಅವರು ಹೇಳಿದರು.

“ಬೆಳಗಿನ ವೇಳೆಯಲ್ಲಿ ಸಭೆಗಳು ಹಾಗೂ ಇತರ ಕಾರ್ಯಕ್ರಮಗಳು ಇರುತ್ತವೆ. ಹೀಗಾಗಿ ಈ ಸಮಯದಲ್ಲಿ ಆಸ್ಪತ್ರೆಗೆ ಬಂದಿದ್ದೇನೆ. ಈ ಸಮಯದಲ್ಲೇ ಆಸ್ಪತ್ರೆಯ ನಿಜವಾದ ಸ್ಥಿತಿ ಗೊತ್ತಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುತ್ತಾರೆ. ಎಷ್ಟೇ ಜನ ಬಂದರೂ ವೈದ್ಯರು ಸೇವೆ ನೀಡಬೇಕು,” ಎಂದು ಖಾದರ್ ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ಆಂಬುಲೆನ್ಸ್‌ಗಳ ಹಾವಳಿ ಕುರಿತು ಪ್ರತಿಕ್ರಿಯಿಸಿದ ಅವರು, ಇಲಾಖೆಯ ಪರಿಶೀಲನಾ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ವೈದ್ಯರಿಗೆ ನಿರ್ಭಯವಾಗಿ ಕೆಲಸ ಮಾಡುವ ವಾತಾವರಣ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದರು.

ಖಾತೆ ಹಂಚಿಕೆ ಸಂಬಂಧ ಸಚಿವ ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖಾದರ್, “ಅದು ನನ್ನ ಇಲಾಖೆಗೆ ಸಂಬಂಧಿಸಿದ ವಿಷಯವಲ್ಲ. ಆ ಬಗ್ಗೆ ನನಗೆ ಮಾಹಿತಿ ಇಲ್ಲ. ಪಕ್ಷದ ನಾಯಕರು ಈ ವಿಚಾರವನ್ನು ನೋಡಿಕೊಳ್ಳುತ್ತಾರೆ,” ಎಂದು ಪ್ರತಿಕ್ರಿಯಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!