HomeKarnataka Newsಸಿಎಂ ಆದ ಬಳಿಕ ಹರಕೆ ತೀರಿಸಿದ ಡಿ.ಕೆ. ಶಿವಕುಮಾರ್: ಅಣ್ಣಮ್ಮದೇವಿ ಸನ್ನಿಧಿಯಲ್ಲಿ ವಿಶೇಷ ಪೂಜೆ

ಸಿಎಂ ಆದ ಬಳಿಕ ಹರಕೆ ತೀರಿಸಿದ ಡಿ.ಕೆ. ಶಿವಕುಮಾರ್: ಅಣ್ಣಮ್ಮದೇವಿ ಸನ್ನಿಧಿಯಲ್ಲಿ ವಿಶೇಷ ಪೂಜೆ

For Dai;y Updates Join Our whatsapp Group

Spread the love

ಬೆಂಗಳೂರು: ದೇವರ ಮೇಲೆ ಅಪಾರ ಭಕ್ತಿ ಮತ್ತು ನಂಬಿಕೆ ಹೊಂದಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಗರದ ಅಣ್ಣಮ್ಮದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.

ರಾಜ್ಯದ ಪ್ರಮುಖ ದೇವಾಲಯಗಳಿಗೆ ಆಗಾಗ ಭೇಟಿ ನೀಡುವ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ತೆರಳಿ ವಿಶೇಷ ಪೂಜೆ ಸಲ್ಲಿಸುವುದು ರೂಢಿಯಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ತಕ್ಷಣವೇ ಅಜ್ಜಯ್ಯನ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜಾಕೈಂಕರ್ಯ ನೆರವೇರಿಸಿದ್ದ ಅವರು, ಇದೀಗ ನಗರದ ಅಧಿದೇವತೆ ಎಂದೇ ಪ್ರಸಿದ್ಧವಾಗಿರುವ ಅಣ್ಣಮ್ಮದೇವಿ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಮುಖ್ಯಮಂತ್ರಿಯಾಗುವ ಅವಕಾಶ ದೊರೆತರೆ ಅಣ್ಣಮ್ಮದೇವಿ ದೇವಸ್ಥಾನಕ್ಕೆ ಬಂದು ಹರಕೆ ತೀರಿಸುವುದಾಗಿ ಈ ಹಿಂದೆ ಸಂಕಲ್ಪ ಮಾಡಿಕೊಂಡಿದ್ದ ಡಿ.ಕೆ. ಶಿವಕುಮಾರ್ ಅವರು, ಇಂದು ಆ ಹರಕೆಯನ್ನು ನೆರವೇರಿಸಿದರು. ದೇವಸ್ಥಾನದಲ್ಲಿ ಉಪ್ಪು ಮತ್ತು ಮೊಸರು ಸಮರ್ಪಿಸಿ ರಾಜ್ಯದಲ್ಲಿ ಸುಖ, ಶಾಂತಿ ಹಾಗೂ ನೆಮ್ಮದಿ ನೆಲೆಸಲೆಂದು ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ತಾಯಿ ಅಣ್ಣಮ್ಮದೇವಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಅವರು, ಬಳಿಕ ಬಿಸಿಲು ಮಾರಮ್ಮ ದೇವಿಯ ಸನ್ನಿಧಿಗೂ ಭೇಟಿ ನೀಡಿ ಉಪ್ಪು ಮತ್ತು ಮೊಸರು ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!