ಬೆಂಗಳೂರು: ಭಾರತ್ ಜೋಡೋ ಯುವ ಸಂಘಕ್ಕೆ ಸರ್ಕಾರದಿಂದ ಹಣ ನೀಡಬಾರದು ಎಂದು ಪರಿಷತ್ ವಿಪಕ್ಷ ನಾಯಕ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರಿ ಬೊಕ್ಕಸದಿಂದ ಯಾವುದೇ ಅನುದಾನ ನೀಡಬಾರದು ಎಂದು ಒತ್ತಾಯಿಸಿದರು. ಸಮಾಜ ಕಲ್ಯಾಣ ಇಲಾಖೆಯ ಕುರಿತು ಕೂಡ ಟೀಕೆ ವ್ಯಕ್ತಪಡಿಸಿದ ಅವರು, ಇಲಾಖೆಯ ನೇಮಕಾತಿ ಮತ್ತು ನಿರ್ವಹಣೆ ವಿಚಾರದಲ್ಲಿಯೂ ಪ್ರಶ್ನೆಗಳನ್ನು ಎತ್ತಿದರು.
ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನವನ್ನು ಟೀಕಿಸಿದ ಅವರು, ಗೃಹಲಕ್ಷ್ಮೀ ಯೋಜನೆಯ ಬಾಕಿ ಪಾವತಿ, ಇಲಾಖೆಗಳ ಆಡಳಿತ ವೈಫಲ್ಯ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.
ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ ಅವರು, ಆಡಳಿತದಲ್ಲಿ ಸಮನ್ವಯ ಇಲ್ಲದೆ ಗೊಂದಲ ಉಂಟಾಗಿದೆ. ವಿವಿಧ ಇಲಾಖೆಗಳ ಬದಲಾವಣೆಗಳು ಹಾಗೂ ರಾಜಕೀಯ ಬೆಳವಣಿಗೆಗಳನ್ನು ಉಲ್ಲೇಖಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಅಭ್ಯರ್ಥಿ ಆಯ್ಕೆ ಶೀಘ್ರದಲ್ಲೇ ಪ್ರಕಟವಾಗಲಿದೆ ಎಂದು ಅವರು ಇದೇ ವೇಳೆ ತಿಳಿಸಿದರು.



