ಬೆಂಗಳೂರು: 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದು ಪ್ರಕಟಿಸಿದ್ದು, ವಿವಿಧ ವೃತ್ತಿಪರ ಕೋರ್ಸ್‌ಗಳ ಟಾಪರ್‌ಗಳ ಪಟ್ಟಿಯೂ ಬಹಿರಂಗಗೊಂಡಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಆರ್‌ವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ತನಿಷಾ ಕಾರ್ತಿಕ್ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮೆರೆದಿದ್ದಾರೆ.
ಏಪ್ರಿಲ್ 22, 23 ಮತ್ತು 24ರಂದು ನಡೆದಿದ್ದ ಯುಜಿ ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಇಂಜಿನಿಯರಿಂಗ್ ವಿಭಾಗದ ಮೊದಲ ಮೂರು ಸ್ಥಾನಗಳನ್ನು ವಿದ್ಯಾರ್ಥಿಗಳು ಅಲಂಕರಿಸಿದ್ದಾರೆ.
ಇಂಜಿನಿಯರಿಂಗ್ ವಿಭಾಗದ ಟಾಪ್-3 ರ್ಯಾಂಕ್‌ಗಳು
- ತನಿಷಾ ಕಾರ್ತಿಕ್ (ಆರ್‌ವಿ ಪಿಯು ಕಾಲೇಜು, ಬೆಂಗಳೂರು) – 1ನೇ ರ್ಯಾಂಕ್
- ಶ್ರಾಜನ್ (ಸರ್ ಎಂ.ವಿ. ಪಿಯು ಕಾಲೇಜು, ಬೆಳ್ತಂಗಡಿ) – 2ನೇ ರ್ಯಾಂಕ್
- ನಿನಾದ್ ವಸಿಷ್ಠ (ಆರ್‌ವಿ ಪಿಯು ಕಾಲೇಜು, ಜಯನಗರ) – 3ನೇ ರ್ಯಾಂಕ್
ವೆಟನರಿ ವಿಭಾಗ
- ನಯನಾ ಗೋಪಿ – 1ನೇ ರ್ಯಾಂಕ್
- ಅಮೂಲ್ಯ – 2ನೇ ರ್ಯಾಂಕ್
- ರಿತ್ವಿಕ್ ಕುಮಾರ್ – 3ನೇ ರ್ಯಾಂಕ್
ಬಿಎಸ್‌ಸಿ ಅಗ್ರಿಕಲ್ಚರ್ ವಿಭಾಗ
- ನಿನಾದ್ ವಸಿಷ್ಠ – 1ನೇ ರ್ಯಾಂಕ್
- ಅನ್ಮೊಲ್ ಪ್ರಭು – 2ನೇ ರ್ಯಾಂಕ್
- ಸಮಯ್ – 3ನೇ ರ್ಯಾಂಕ್
ಬಿಎಸ್‌ಸಿ ನರ್ಸಿಂಗ್, ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮಾ ಹಾಗೂ ಡಿ-ಫಾರ್ಮಾ ವಿಭಾಗಗಳಲ್ಲಿ
- ನಯನಾ ಗೋಪಿ – 1ನೇ ರ್ಯಾಂಕ್
- ಅಮೂಲ್ಯ – 2ನೇ ರ್ಯಾಂಕ್
- ಸುಚಿತ್ರಾ – 3ನೇ ರ್ಯಾಂಕ್
ಈ ಬಾರಿಯ KCET ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದು, ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಸ್ಪರ್ಧೆಯಲ್ಲಿ ಮೇಲುಗೈ ಸಾಧಿಸಿದ್ದಾರೆ. ಫಲಿತಾಂಶ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ಕೌನ್ಸೆಲಿಂಗ್ ಹಾಗೂ ಸೀಟು ಹಂಚಿಕೆ ಪ್ರಕ್ರಿಯೆಗೆ ಕೆಇಎ ಶೀಘ್ರದಲ್ಲೇ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆಯಿದೆ.



