HomeKarnataka Newsಅಪ್ರಾಪ್ತ ಬಾಲಕಿಗೆ ಮದುವೆ ಆಮಿಷ; ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 3 ವರ್ಷ ಜೈಲು

ಅಪ್ರಾಪ್ತ ಬಾಲಕಿಗೆ ಮದುವೆ ಆಮಿಷ; ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 3 ವರ್ಷ ಜೈಲು

For Dai;y Updates Join Our whatsapp Group

Spread the love

ದಾವಣಗೆರೆ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 15 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ವಿರೂಪಾಕ್ಷಿ ಶಿಕ್ಷೆಗೆ ಗುರಿಯಾದ ಆರೋಪಿ. 2023ರ ಅಕ್ಟೋಬರ್ 4ರಂದು ಆತ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದನು. ಮಗಳು ಕಾಣೆಯಾಗಿರುವ ಕುರಿತು ಬಾಲಕಿಯ ತಂದೆ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳು, ಆರೋಪಿ ಬಾಲಕಿಯನ್ನು ಬಳ್ಳಾರಿ ಜಿಲ್ಲೆಯ ಕುಡಿತಿನಿಗೆ ಕರೆದೊಯ್ದಿರುವುದನ್ನು ಪತ್ತೆಹಚ್ಚಿದ್ದರು. ಪರೀಕ್ಷೆ ಬರೆಯಲು ಬಂದಿದ್ದೇವೆ ಎಂದು ಸಂಬಂಧಿಕರಿಗೆ ಸುಳ್ಳು ಮಾಹಿತಿ ನೀಡಿ ಅವರ ಮನೆಯಲ್ಲಿ ತಂಗಿದ್ದ ಆರೋಪಿ, ಅಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ತನಿಖೆ ಪೂರ್ಣಗೊಳಿಸಿದ ಪೊಲೀಸರು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಿರೂಪಾಕ್ಷಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ 15 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ವಿಧಿಸಲಾದ ದಂಡದ ಮೊತ್ತವನ್ನು ಸಂತ್ರಸ್ತ ಬಾಲಕಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಬಸವರಾಜ್ ವಾದ ಮಂಡಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!