ವಿಜಯಸಾಕ್ಷಿ ಸುದ್ದಿ, ಗದಗ: “ಗಿಡಮರಗಳು ವಿಶ್ವದ ಸಕಲ ಜೀವರಾಶಿಗಳ ಜೀವಾಳವಾಗಿದ್ದು, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ನಿವೃತ್ತ ಪ್ರಾಧ್ಯಾಪಕ ಶಿವನಗೌಡ ಗೌಡರ ಹೇಳಿದರು.
ನಗರದ ಬಸವ ಯೋಗ ಮಹಾವಿದ್ಯಾಲಯ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಲಿಂಬೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಪರಿಸರ ನಾಶದಿಂದ ಭವಿಷ್ಯದಲ್ಲಿ ಮಾನವ ಸಂಕುಲ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದ್ದು, “ಹಸಿರೇ ಉಸಿರು” ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿದ್ಯಾ ಬಿ. ಸ್ವಾಮಿ ಪರಿಸರ ಸಂರಕ್ಷಣೆಯಲ್ಲಿ ರೈತರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಎಂ. ವ್ಹಿ. ಐಹೊಳಿ, ಸಸಿ ನೆಡುವುದರ ಜೊತೆಗೆ ಅವುಗಳನ್ನು ಪೋಷಿಸಿ ಬೆಳೆಸುವ ಕಾರ್ಯವೂ ಅಗತ್ಯ ಎಂದು ಹೇಳಿದರು.
ವೇದಿಕೆಯಲ್ಲಿ ಕೆ.ಎಸ್. ಪಲ್ಲೇದ, ಬಿ.ಬಿ. ಇಬ್ರಾಹಿಂಪೂರ, ವಿಜಯಲಕ್ಷ್ಮೀ ಆನೆಹೊಸೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.



