ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅತಿ ದೀರ್ಘಾವಧಿ ಚುನಾಯಿತ ಪ್ರಧಾನಿಯಾಗಿ ಹೊಸ ದಾಖಲೆ ನಿರ್ಮಿಸಿರುವ ಹಿನ್ನೆಲೆಯಲ್ಲಿ ಸ್ಯಾಂಡಲ್ವುಡ್ ತಾರೆಯರು ಅಭಿನಂದನೆ ಸಲ್ಲಿಸಿದ್ದಾರೆ.
ಜವಾಹರಲಾಲ್ ನೆಹರೂ ಅವರ ದಾಖಲೆಯನ್ನು ಹಿಂದಿಕ್ಕಿರುವ ಮೋದಿಯವರ ಸಾಧನೆಗೆ ನಟ ಕಿಚ್ಚ ಸುದೀಪ್ ಹಾಗೂ ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಿಚ್ಚ ಸುದೀಪ್ ತಮ್ಮ ಸಂದೇಶದಲ್ಲಿ, “12 ವರ್ಷಗಳ ಕಾಲ ನಿರಂತರ ಸಮರ್ಪಣೆ ಮತ್ತು ಶ್ರಮದೊಂದಿಗೆ ದೇಶವನ್ನು ಮುನ್ನಡೆಸಿರುವುದು ಹೆಮ್ಮೆಯ ಸಂಗತಿ. ನಿಮ್ಮ ಮುಂದಿನ ಪಯಣವೂ ಯಶಸ್ವಿಯಾಗಲಿ” ಎಂದು ಹಾರೈಸಿದ್ದಾರೆ.
ರಿಷಬ್ ಶೆಟ್ಟಿ ಕೂಡ ಎಕ್ಸ್ ಖಾತೆಯಲ್ಲಿ ಸಂದೇಶ ಹಂಚಿಕೊಂಡು, “ಐತಿಹಾಸಿಕ ನಾಯಕನಿಗೆ ಮತ್ತೊಂದು ಮಹತ್ವದ ಮೈಲಿಗಲ್ಲು. ವಿಕಸಿತ ಭಾರತದ ಕನಸನ್ನು ನನಸಾಗಿಸುವ ನಿಮ್ಮ ನಾಯಕತ್ವ ಇನ್ನಷ್ಟು ಎತ್ತರಕ್ಕೆ ತಲುಪಲಿ” ಎಂದು ಶುಭ ಕೋರಿದ್ದಾರೆ.
ಪ್ರಧಾನಿ ಮೋದಿ ಅವರ ಈ ಸಾಧನೆಗೆ ರಾಜಕೀಯ, ಸಿನಿಮಾ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.



