HomeKarnataka Newsರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಕೇಂದ್ರದ ವಿರುದ್ಧ ಆರೋಪ: ಬಿ.ವೈ. ವಿಜಯೇಂದ್ರ ವಾಗ್ದಾಳಿ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಕೇಂದ್ರದ ವಿರುದ್ಧ ಆರೋಪ: ಬಿ.ವೈ. ವಿಜಯೇಂದ್ರ ವಾಗ್ದಾಳಿ

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರದ ವಿರುದ್ಧ ನಿರಂತರವಾಗಿ ಮಲತಾಯಿ ಧೋರಣೆ ಮತ್ತು ಅನ್ಯಾಯದ ಆರೋಪಗಳನ್ನು ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಮಹತ್ವದ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಟೀಕಿಸಿದರು.

ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗಿದೆ ಎಂಬ ಆರೋಪಗಳೂ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿವೆ. ರಾಜ್ಯ ಸರ್ಕಾರ ಅಭಿವೃದ್ಧಿ ವಿಚಾರದಲ್ಲಿ ವಿಫಲವಾಗಿರುವುದನ್ನು ಮರೆಮಾಚಲು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುವ ತಂತ್ರ ಅನುಸರಿಸುತ್ತಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಇದೇ ವೇಳೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಮಾತನಾಡಿ, ಮನೆಮನೆಗೆ ಕುಡಿಯುವ ನೀರು ಪೂರೈಕೆ ಮಾಡುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಜಲಜೀವನ್ ಮಿಷನ್ ಯೋಜನೆಯಡಿ ಅಗತ್ಯ ಅನುದಾನವನ್ನು ಒದಗಿಸುತ್ತಿದ್ದು, ಆ ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ಸುರಕ್ಷಿತ ಹಾಗೂ ಶುದ್ಧ ಕುಡಿಯುವ ನೀರನ್ನು ಪ್ರತಿಯೊಂದು ಮನೆಗೆ ತಲುಪಿಸುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ ಎಂದು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!