ವಿಜಯಸಾಕ್ಷಿ ಸುದ್ದಿ, ರೋಣ:
ಪಟ್ಟಣದಲ್ಲಿ ದಲಿತ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಪೊಲೀಸ್ ಸಿಬ್ಬಂದಿ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ಸೋಮವಾರ ಮಧ್ಯಾಹ್ನ ತಹಸೀಲ್ದಾರ ಕಚೇರಿಯ ಆವರಣದಲ್ಲಿ ನಡೆದಿದೆ.
ಗಣರಾಜ್ಯೋತ್ಸವ ದಿನದಂದು ರಾಯಚೂರಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಭಾವ ಚಿತ್ರಕ್ಕೆ ಅಪಮಾನವಾಗಿರುವ ಘಟನೆ ಖಂಡಿಸಿ ದಲಿತ ಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ರ‍್ಯಾಲಿ ತಹಸೀಲ್ದಾರ ಕಚೇರಿಗೆ ಮನವಿ ಸಲ್ಲಿಸಲು ಬಂದ ಸಂದರ್ಭದಲ್ಲಿ ಕಟ್ಟಡಲ್ಲಿದ್ದ ಹೆಜ್ಜೇನು ಏಕಾಏಕಿ ದಾಳಿ ನಡೆಸಿದೆ.
ಹೆಜ್ಜೇನು ದಾಳಿಗೆ ಭಯಬೀತಗೊಂಡ ಪ್ರತಿಭಟನಾ ನಿರತರು ಹಾಗೂ ತಹಸೀಲ್ದಾರ ಕಚೇರಿ ಸಿಬ್ಬಂದಿಗಳು ಹೆಜ್ಜೇನುಗಳಿಂದ ತಪ್ಪಿಸಿಕೊಳ್ಳಲು ಧಿಕ್ಕಾಪಾಲಾಗಿ ಓಡಿ ಹೋದ ಘಟನೆ ನಡೆಯಿತು. ದಾಳಿಯಲ್ಲಿ ಸಿಬ್ಬಂದಿ ಸೇರಿದಂತೆ ನಾಲ್ವರಿಗೆ ಗಾಯವಾಗಿರುವ ಘಟನೆ ನಡೆಯಿತು.