HomeKarnataka Newsಮತ್ತೆ ಸುದ್ದಿಯಾದ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ: ಏರ್ʼಪೋರ್ಟ್ ರಸ್ತೆಯಲ್ಲಿ ಪುಂಡಾಟದ ವಿಡಿಯೋ ವೈರಲ್

ಮತ್ತೆ ಸುದ್ದಿಯಾದ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ: ಏರ್ʼಪೋರ್ಟ್ ರಸ್ತೆಯಲ್ಲಿ ಪುಂಡಾಟದ ವಿಡಿಯೋ ವೈರಲ್

For Dai;y Updates Join Our whatsapp Group

Spread the love

ಬೆಂಗಳೂರು: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅವರ ಒಡೆತನದ ಲ್ಯಾಂಬೋರ್ಗಿನಿ ಕಾರು ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರು ಏರ್ಪೋರ್ಟ್ ರಸ್ತೆಯಲ್ಲಿ ಕಾರು ಡ್ರಿಫ್ಟಿಂಗ್ ಮಾಡುತ್ತಾ, ಸೈಲೆನ್ಸರ್‌ನಿಂದ ಬೆಂಕಿ ಉಗುಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

KA 05 NR 0009 ನೋಂದಣಿ ಸಂಖ್ಯೆಯ ಈ ಲ್ಯಾಂಬೋರ್ಗಿನಿ ಕಾರಿನ ವಿಡಿಯೋ ಇದೀಗ ಪೊಲೀಸರ ಗಮನ ಸೆಳೆದಿದ್ದು, ಘಟನೆ ನಡೆದ ಸ್ಥಳ ಹಾಗೂ ಕಾಲಾವಧಿ ಕುರಿತು ತನಿಖೆ ಆರಂಭಿಸಲಾಗಿದೆ. ಘಟನೆ ಯಾವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ವೈರಲ್ ವಿಡಿಯೋ ಆಧರಿಸಿ ಮೊದಲು ಪ್ರಕರಣ ದಾಖಲಿಸಿ, ಬಳಿಕ ವಿವರವಾದ ತನಿಖೆ ನಡೆಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಕಾರು ಚಲಾಯಿಸಿದ್ದವರು ಯಾರು, ಆ ವೇಳೆ ವಾಹನದಲ್ಲಿ ಇನ್ನಾರು ಇದ್ದರು ಎಂಬುದರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಈ ಕಾರು ಇದೇ ಮೊದಲ ಬಾರಿಗೆ ವಿವಾದಕ್ಕೆ ಸಿಲುಕಿಲ್ಲ. ಈ ಹಿಂದೆ ಮಾರ್ಚ್ 21ರಂದು ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಹಾಗೂ ಕಬ್ಬನ್ ರಸ್ತೆಯಲ್ಲಿ ಇದೇ ಲ್ಯಾಂಬೋರ್ಗಿನಿ ಕಾರಿನಿಂದ ಡ್ರಿಫ್ಟಿಂಗ್ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಆ ಸಂದರ್ಭದಲ್ಲಿ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ರಿಕ್ಕಿ ರೈ ಅವರೇ ಕಾರು ಚಲಾಯಿಸಿದ್ದಾಗಿ ಪೊಲೀಸರು ದೃಢಪಡಿಸಿದ್ದರು.

ಆರಂಭದಲ್ಲಿ ಆರೋಪವನ್ನು ನಿರಾಕರಿಸಿದ್ದ ರಿಕ್ಕಿ ರೈ, ಬಳಿಕ ಸಿಸಿಟಿವಿ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ದಂಡ ಪಾವತಿಸಿದ್ದರು. ಪ್ರಕರಣವು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಇದೀಗ ಮತ್ತೆ ಅದೇ ವಾಹನದಿಂದ ಅತಿವೇಗ ಚಾಲನೆ, ಡ್ರಿಫ್ಟಿಂಗ್ ಹಾಗೂ ಸೈಲೆನ್ಸರ್ ಮodyಫಿಕೇಶನ್ ಸೇರಿದಂತೆ ನಿಯಮ ಉಲ್ಲಂಘನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಪರಿಶೀಲನೆ ವೇಳೆ ಆರೋಪಗಳು ದೃಢಪಟ್ಟರೆ ಅತಿವೇಗ ಚಾಲನೆ, ಅಕ್ರಮ ಸೈಲೆನ್ಸರ್ ಬಳಕೆ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಅಪಾಯಕಾರಿ ಚಾಲನೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!