ಚೆನ್ನೈ: ‘AK64’ ಸಿನಿಮಾ ಆರಂಭಕ್ಕೂ ಮುನ್ನವೇ ನಟ ಅಜಿತ್ ಕುಮಾರ್ ಅವರ ಸಂಭಾವನೆ ವಿಚಾರ ತಮಿಳು ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಹಲವು ಸೋಲುಗಳ ಬಳಿಕ ಅಜಿತ್ ತಮ್ಮ ಸಂಭಾವನೆಯನ್ನು ಕಡಿತಗೊಳಿಸಲು ನಿರ್ಧರಿಸಿದ್ದರೂ, ನಿರ್ಮಾಪಕರು ಮತ್ತು ನಟರ ನಡುವೆ ಇನ್ನೂ ಒಪ್ಪಂದ ಅಂತಿಮಗೊಂಡಿಲ್ಲ.
ವರದಿಗಳ ಪ್ರಕಾರ, ಅಜಿತ್ ತಮ್ಮ ಮುಂದಿನ ಚಿತ್ರದಿಗಾಗಿ ಸುಮಾರು 150 ಕೋಟಿ ರೂ. ಸಂಭಾವನೆ ಕೇಳಿದ್ದಾರೆ. ಆದರೆ ಪ್ರಮುಖ ನಿರ್ಮಾಣ ಸಂಸ್ಥೆಗಳು ಈ ಮೊತ್ತಕ್ಕೆ ಒಪ್ಪದ ಕಾರಣ ಮಾತುಕತೆ ಸ್ಥಗಿತಗೊಂಡಿದೆ. ಒಂದು ಪ್ರಮುಖ ಬ್ಯಾನರ್ 90 ಕೋಟಿ ರೂ.ಗಿಂತ ಹೆಚ್ಚು ನೀಡಲು ಸಿದ್ಧವಿಲ್ಲ ಎಂದು ಹೇಳಲಾಗಿದ್ದು, ಮತ್ತೊಂದು ಸಂಸ್ಥೆ 110 ಕೋಟಿ ರೂ.ವರೆಗೆ ಆಫರ್ ನೀಡಿದೆ ಎನ್ನಲಾಗಿದೆ.
ಈ ಹಿಂದೆ ಅಜಿತ್ ಅವರ ಸಂಭಾವನೆ 170-200 ಕೋಟಿ ರೂ. ನಡುವೆಯಿತ್ತು ಎನ್ನಲಾಗುತ್ತಿದೆ. ಆದರೆ ಬಾಕ್ಸ್ಆಫೀಸ್ನಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು ಸಿಗದ ಹಿನ್ನೆಲೆಯಲ್ಲಿ ಮಾರುಕಟ್ಟೆ ಲೆಕ್ಕಾಚಾರಗಳು ಬದಲಾಗಿವೆ.
ಇದೀಗ ನಿರ್ದೇಶಕ ಅಧಿಕ್ ರವಿಚಂದ್ರನ್ ಜೊತೆ ಮತ್ತೊಂದು ಸಿನಿಮಾ ಹಾಗೂ ನಿರ್ದೇಶಕ ಸಿರುತೈ ಶಿವ ಜೊತೆ ಹೊಸ ಪ್ರಾಜೆಕ್ಟ್ ಮಾಡುವ ಸಾಧ್ಯತೆಗಳಿವೆ. ಆದರೆ ಸಂಭಾವನೆ ಗೊಂದಲ ಬಗೆಹರಿಯುವವರೆಗೆ ‘AK64’ ಕುರಿತು ಯಾವುದೇ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಕಾಣಿಸುತ್ತಿಲ್ಲ.



