ನವದೆಹಲಿ: ವಾರಾಂತ್ಯದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.
ಕಳೆದ ಶುಕ್ರವಾರ ಗ್ರಾಂಗೆ ₹270 ಏರಿಕೆಯಾಗಿದ್ದ ಚಿನ್ನದ ದರ, ಈ ವಾರಾಂತ್ಯದಲ್ಲಿ 45 ರೂ.ಗಳಷ್ಟು ಹೆಚ್ಚಳವಾಗಿದೆ.
ಅಪರಂಜಿ (24 ಕ್ಯಾರಟ್) ಚಿನ್ನದ ಬೆಲೆ ₹14,900 ಗಡಿ ದಾಟಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಚಿನ್ನದ ಬೆಲೆಯಲ್ಲಿ ಏರಿಕೆಯ ಪ್ರವೃತ್ತಿ ಮುಂದುವರಿದಿದೆ. ಇದೇ ವೇಳೆ ಬೆಳ್ಳಿ ಬೆಲೆಯೂ ಪ್ರತಿ ಕಿಲೋಗೆ ₹5ರಷ್ಟು ಏರಿಕೆಯಾಗಿದೆ.
ಭಾರತದಲ್ಲಿ ಸದ್ಯ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ₹1,36,650 ಆಗಿದ್ದು, 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ ₹1,49,080 ತಲುಪಿದೆ. ಬೆಳ್ಳಿ ಬೆಲೆ 100 ಗ್ರಾಂಗೆ ₹26,000ರಷ್ಟಿದೆ.
ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿಯೂ ಇದೇ ದರಗಳು ಮುಂದುವರಿದಿದ್ದು, ತಮಿಳುನಾಡು ಮತ್ತು ಕೇರಳದ ಕೆಲ ಭಾಗಗಳಲ್ಲಿ ಬೆಳ್ಳಿ ದರ ₹27,000ವರೆಗೆ ದಾಖಲಾಗಿದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,908 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,665 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,181 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,908 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,665 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ.



