HomeBengaluru News2000 ಗೃಹಲಕ್ಷ್ಮಿ ಹಣ ಪಡೆಯುವವರೇ ಗಮನಿಸಿ! ಗ್ಯಾರಂಟಿ ಪಡೆಯಲು ಮತ್ತೆ ಅರ್ಜಿ ಹಾಕಿ, ಏನೆಲ್ಲಾ...

2000 ಗೃಹಲಕ್ಷ್ಮಿ ಹಣ ಪಡೆಯುವವರೇ ಗಮನಿಸಿ! ಗ್ಯಾರಂಟಿ ಪಡೆಯಲು ಮತ್ತೆ ಅರ್ಜಿ ಹಾಕಿ, ಏನೆಲ್ಲಾ ದಾಖಲೆ ಕೊಡಬೇಕು?

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಿಗೆ ಮೇಜರ್ ಸರ್ಜರಿ ನಡೆಸಲು ಸರ್ಕಾರ ಮುಂದಾಗಿದೆ.

ಯೋಜನೆಗಳಲ್ಲಿ ನಕಲಿ ಹಾಗೂ ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚುವ ಉದ್ದೇಶದಿಂದ ಎರಡೂ ಯೋಜನೆಗಳ ಫಲಾನುಭವಿಗಳಿಗೆ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಕೆ ಕಡ್ಡಾಯ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ಅರ್ಜಿ ಸಲ್ಲಿಸಿ ಮರು ಪರಿಶೀಲನೆಗೆ ಒಳಗಾದವರಿಗಷ್ಟೇ ಮುಂದಿನ ದಿನಗಳಲ್ಲಿ ಯೋಜನೆಗಳ ಸೌಲಭ್ಯ ಮುಂದುವರಿಯುವ ಸಾಧ್ಯತೆ ಇದೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ಸುಮಾರು 1.28 ಕೋಟಿ ಫಲಾನುಭವಿಗಳಿದ್ದು, ಅವರಲ್ಲಿ ಲಕ್ಷಾಂತರ ಮಂದಿ ಅನರ್ಹರಾಗಿರುವ ಶಂಕೆ ವ್ಯಕ್ತವಾಗಿದೆ. ತೆರಿಗೆ ಪಾವತಿದಾರರು, ಮೃತಪಟ್ಟ ವ್ಯಕ್ತಿಗಳ ಹೆಸರಿನಲ್ಲಿ ಹಣ ಪಡೆಯುತ್ತಿರುವವರು ಹಾಗೂ ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆಯುತ್ತಿರುವವರನ್ನು ಗುರುತಿಸಲು ಸರ್ಕಾರ ಮುಂದಾಗಿದೆ. ಮೃತಪಟ್ಟವರ ಖಾತೆಗಳಿಗೆ ಸುಮಾರು 100 ಕೋಟಿ ರೂ.ಗೂ ಅಧಿಕ ಹಣ ವರ್ಗಾವಣೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಇದರಿಂದ ಯೋಜನೆಯ ಸಮಗ್ರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಹೇಳಲಾಗಿದೆ.

ಇದೇ ರೀತಿ 1.68 ಕೋಟಿಗೂ ಹೆಚ್ಚು ಗೃಹಜ್ಯೋತಿ ಫಲಾನುಭವಿಗಳ ಮಾಹಿತಿಯನ್ನೂ ಮರು ಪರಿಶೀಲನೆ ನಡೆಸಲಾಗುತ್ತಿದೆ. ಒಂದೇ ವ್ಯಕ್ತಿಯ ಹೆಸರಿನಲ್ಲಿ ಹಲವು ವಿದ್ಯುತ್ ಮೀಟರ್‌ಗಳಿದ್ದು, ವಾಣಿಜ್ಯ ಚಟುವಟಿಕೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಬಳಸಲಾಗುತ್ತಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆಯಂತೆ ಹೊಸ ಅರ್ಜಿ ನಮೂನೆ ಸಿದ್ಧಪಡಿಸಲಾಗುತ್ತಿದ್ದು, ಫಲಾನುಭವಿಗಳ ಆಧಾರ್, ಬ್ಯಾಂಕ್ ಖಾತೆ, ಪಡಿತರ ಚೀಟಿ, ಆದಾಯ ತೆರಿಗೆ ಹಾಗೂ ಜಿಎಸ್‌ಟಿ ವಿವರ ಸೇರಿದಂತೆ ಹಲವು ಮಾಹಿತಿಗಳನ್ನು ಪಡೆದು ಮರು ಪರಿಶೀಲನೆ ನಡೆಸಲಾಗುತ್ತದೆ. ಬಯೋಮೆಟ್ರಿಕ್ ದೃಢೀಕರಣದ ಮೂಲಕ ನೈಜ ಫಲಾನುಭವಿಗಳನ್ನು ಗುರುತಿಸಿ, ಅರ್ಹರಿಗೆ ಮಾತ್ರ ಯೋಜನೆಗಳ ಲಾಭ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ.

ಶೀಘ್ರದಲ್ಲೇ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳು ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸುವ ಸಾಧ್ಯತೆ ಇದ್ದು, ಈ ಕುರಿತು ಸರ್ಕಾರ ಅಧಿಕೃತ ಮಾರ್ಗಸೂಚಿ ಪ್ರಕಟಿಸುವ ನಿರೀಕ್ಷೆ ಇದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!