HomeKarnataka Newsಭಾರತದ ಆರ್ಥಿಕತೆ ವಿನಾಶದ ಹಾದಿಯಲ್ಲಿಲ್ಲ, ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ನಿರ್ಮಲಾ ಸೀತಾರಾಮನ್

ಭಾರತದ ಆರ್ಥಿಕತೆ ವಿನಾಶದ ಹಾದಿಯಲ್ಲಿಲ್ಲ, ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ನಿರ್ಮಲಾ ಸೀತಾರಾಮನ್

For Dai;y Updates Join Our whatsapp Group

Spread the love

ಬೆಂಗಳೂರು: ಭಾರತದ ಆರ್ಥಿಕತೆ ವಿನಾಶದತ್ತ ಸಾಗುತ್ತಿದೆ ಎಂಬ ಟೀಕೆಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಳ್ಳಿಹಾಕಿದ್ದು, ದೇಶದ ಆರ್ಥಿಕತೆ ಬಲಿಷ್ಠವಾಗಿದ್ದು, ಜಿಡಿಪಿ ಬೆಳವಣಿಗೆ ಉತ್ತಮ ಮಟ್ಟದಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಗರದ ಜಯನಗರದಲ್ಲಿ ಆಯೋಜಿಸಿದ್ದ ವಿಕಸಿತ ಭಾರತ್ ಸಂಕಲ್ಪ ಸಮಾವೇಶ’ದಲ್ಲಿ ಮಾತನಾಡಿದ ಅವರು, ಭಾರತದ ಆರ್ಥಿಕತೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದರು.

ಭಾರತದ ಆರ್ಥಿಕತೆ ವಿನಾಶದ ಹಾದಿಯಲ್ಲಿದೆ ಎಂದು ರಾಹುಲ್ ಗಾಂಧಿ ಹೇಳುತ್ತಿದ್ದಾರೆ. ಅವರು ದೇಶದ ಆರ್ಥಿಕ ಸ್ಥಿತಿ ಬಗ್ಗೆ ನಿರಂತರವಾಗಿ ನಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ಜನರ ಬಗ್ಗೆ ಟೀಕಾತ್ಮಕವಾಗಿ ಮಾತನಾಡುತ್ತಾರೆ.

ಆದರೆ ನಾನು ಸ್ಪಷ್ಟವಾಗಿ ಹೇಳುತ್ತೇನೆ, ಭಾರತದ ಆರ್ಥಿಕತೆ ಯಾವುದೇ ರೀತಿಯಲ್ಲೂ ವಿನಾಶದ ಹಾದಿಯಲ್ಲಿಲ್ಲ. ಜಿಡಿಪಿ ಬೆಳವಣಿಗೆ ಉತ್ತಮವಾಗಿದ್ದು, ದೇಶ ವೇಗವಾಗಿ ಆರ್ಥಿಕ ಪ್ರಗತಿ ಸಾಧಿಸುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದ ಅಭಿವೃದ್ಧಿ ಬಗ್ಗೆ ಅನುಮಾನ ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು. ಭಾರತ ದುರ್ಬಲವಾಗುತ್ತಿದೆ ಎಂಬ ಭಾವನೆ ಮೂಡಿಸಲು ಕೆಲವರು ಯತ್ನಿಸುತ್ತಿದ್ದಾರೆ. ಆದರೆ ವಾಸ್ತವ ಪರಿಸ್ಥಿತಿ ಅದಕ್ಕೆ ವಿರುದ್ಧವಾಗಿದೆ ಎಂದರು.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸ್ಥಿರವಾಗಿದೆ ಎಂದು ಹೇಳಿದ ಸಚಿವೆ, ಹಾರ್ಮೂಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಸವಾಲುಗಳು ಎದುರಾಗಿದ್ದರೂ ದೇಶದಲ್ಲಿ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ದೊಡ್ಡ ವ್ಯತ್ಯಯ ಉಂಟಾಗಿಲ್ಲ ಎಂದು ತಿಳಿಸಿದರು.

ಜಾಗತಿಕ ಸವಾಲುಗಳ ನಡುವೆಯೂ ಭಾರತದಲ್ಲಿ ಎಲ್‌ಪಿಜಿ ಕೊರತೆ ಉಂಟಾಗಿಲ್ಲ. ತೈಲ ಸಾಗಣೆ ಮತ್ತು ಸಾಗರ ಸಾರಿಗೆಯಲ್ಲಿ ಹಲವು ಸಮಸ್ಯೆಗಳಿದ್ದರೂ ದೇಶವು ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದೆ. ಆದಾಗ್ಯೂ ಕೆಲವರು ದೇಶದ ಬಗ್ಗೆ ನಕಾರಾತ್ಮಕ ಚಿತ್ರಣ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!