ಕೋಲಾರ: ಮನೆ ಬಳಿಯ ಸಂಪ್ಗೆ ಆಕಸ್ಮಿಕವಾಗಿ ಬಿದ್ದ ಪರಿಣಾಮ ಮೂರು ವರ್ಷದ ಮಗು ಮೃತಪಟ್ಟಿರುವ ದುರ್ಘಟನೆ ಕೋಲಾರ ನಗರದ ಕಾರಂಜಿಕಟ್ಟೆ ಬಡಾವಣೆಯ 10ನೇ ಕ್ರಾಸ್ನಲ್ಲಿ ನಡೆದಿದೆ.
ಮೃತ ಮಗುವನ್ನು ಯಶಸ್ (3) ಎಂದು ಗುರುತಿಸಲಾಗಿದೆ. ಇವರು ವಿಕಾಸ್ ಹಾಗೂ ಹಂಸ ದಂಪತಿಯ ಪುತ್ರನಾಗಿದ್ದಾನೆ.
ಮಾಹಿತಿಯ ಪ್ರಕಾರ, ಯಶಸ್ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಸಂಪ್ಗೆ ಬಿದ್ದಿದ್ದಾನೆ. ವಿಷಯ ತಿಳಿದ ಕೂಡಲೇ ಕುಟುಂಬಸ್ಥರು ಮಗುವನ್ನು ಸಂಪ್ನಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದರೂ, ಅಷ್ಟರಲ್ಲೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಮಗುವಿನ ಅಕಾಲಿಕ ಸಾವಿನಿಂದ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಪೋಷಕರ ದುಃಖ ನೋಡುಗರ ಮನಕಲಕುವಂತಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಗಲ್ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



