ಭಾರತೀಯ ಅಡುಗೆ ಮನೆಗಳಲ್ಲಿ ಸಾಮಾನ್ಯವಾಗಿ ಬಳಸುವ ಸೋಂಪು ಕೇವಲ ಆಹಾರದ ರುಚಿ ಹೆಚ್ಚಿಸುವ ಮಸಾಲೆ ಪದಾರ್ಥವಲ್ಲ, ಆರೋಗ್ಯಕ್ಕೂ ಸಾಕಷ್ಟು ಪ್ರಯೋಜನಗಳನ್ನು ನೀಡುವ ನೈಸರ್ಗಿಕ ಆಹಾರವಾಗಿದೆ.
ವಿಟಮಿನ್, ಫೈಬರ್, ಕ್ಯಾಲ್ಸಿಯಂ, ಆಂಟಿಆಕ್ಸಿಡೆಂಟ್, ಬ್ಯಾಕ್ಟೀರಿಯಾ ವಿರೋಧಿ ಹಾಗೂ ಆಂಟಿ-ಫಂಗಲ್ ಗುಣಗಳನ್ನು ಹೊಂದಿರುವ ಸೋಂಪನ್ನು ಊಟದ ಬಳಿಕ ಸೇವಿಸುವುದರಿಂದ ಹಲವು ಆರೋಗ್ಯ ಲಾಭಗಳನ್ನು ಪಡೆಯಬಹುದು.
ಸೋಂಪು ತಿನ್ನುವುದರಿಂದ ದೊರೆಯುವ ಪ್ರಮುಖ ಪ್ರಯೋಜನಗಳು:
1. ಜೀರ್ಣಕ್ರಿಯೆ ಸುಧಾರಿಸುತ್ತದೆ
ಸೋಂಪು ಜೀರ್ಣಕಾರಿ ಕಿಣ್ವಗಳ ಉತ್ಪಾದನೆಯನ್ನು ಉತ್ತೇಜಿಸಿ ಅಜೀರ್ಣ, ಹೊಟ್ಟೆ ಉಬ್ಬರ, ಗ್ಯಾಸ್ ಹಾಗೂ ಮಲಬದ್ಧತೆ ಸಮಸ್ಯೆಗಳನ್ನು ಕಡಿಮೆ ಮಾಡಲು ನೆರವಾಗುತ್ತದೆ.
2. ಬಾಯಿಯ ದುರ್ವಾಸನೆ ನಿವಾರಣೆ
ಸೋಂಪಿನಲ್ಲಿರುವ ಸುಗಂಧಭರಿತ ಸಂಯುಕ್ತಗಳು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಬಾಯಿಯ ದುರ್ವಾಸನೆ ದೂರ ಮಾಡಿ ಉಸಿರಾಟವನ್ನು ತಾಜಾಗೊಳಿಸುತ್ತವೆ.
3. ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು
ವಿಟಮಿನ್ ಎ ಸಮೃದ್ಧವಾಗಿರುವ ಸೋಂಪು ದೃಷ್ಟಿ ಸುಧಾರಿಸಲು ಸಹಕಾರಿ. ಕಣ್ಣಿನ ಆರೋಗ್ಯ ಕಾಪಾಡಲು ನೆರವಾಗುತ್ತದೆ.
4. ಚರ್ಮದ ಕಾಂತಿ ಹೆಚ್ಚಿಸುತ್ತದೆ
ಆಂಟಿಆಕ್ಸಿಡೆಂಟ್ಗಳಿರುವ ಸೋಂಪು ದೇಹದಲ್ಲಿನ ಹಾನಿಕಾರಕ ಫ್ರೀ ರ್ಯಾಡಿಕಲ್ಗಳ ವಿರುದ್ಧ ಹೋರಾಡಿ ಚರ್ಮದ ಆರೋಗ್ಯವನ್ನು ಉತ್ತಮಗೊಳಿಸುತ್ತದೆ.
5. ತೂಕ ನಿಯಂತ್ರಣಕ್ಕೆ ನೆರವು
ಸೋಂಪು ಜಗಿಯುವುದರಿಂದ ಹೊಟ್ಟೆ ತುಂಬಿದ ಅನುಭವ ಉಂಟಾಗಿ ಅತಿಯಾದ ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
6. ರಕ್ತದೊತ್ತಡ ನಿಯಂತ್ರಣ
ಪೊಟ್ಯಾಸಿಯಮ್ ಸಮೃದ್ಧವಾಗಿರುವ ಸೋಂಪು ರಕ್ತದೊತ್ತಡವನ್ನು ಸಮತೋಲನದಲ್ಲಿಡಲು ನೆರವಾಗುತ್ತದೆ.
7. ಮಾನಸಿಕ ಆರೋಗ್ಯಕ್ಕೆ ಸಹಕಾರಿ
ಸೋಂಪಿನಲ್ಲಿರುವ ಪೋಷಕಾಂಶಗಳು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಿ ಮಾನಸಿಕ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತವೆ.
8. ಚಯಾಪಚಯ ಕ್ರಿಯೆ ಹೆಚ್ಚಿಸುತ್ತದೆ
ಅನೆಥೋಲ್, ಫೆನ್ಸೋನ್ ಮತ್ತು ಎಸ್ಟ್ರಾಗೋಲ್ನಂತಹ ಅಂಶಗಳು ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಿ ದೇಹದ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.



