HomeKarnataka Newsಸ್ಕೀಮ್ ಮಾಡುವಾಗ ಸರ್ಕಾರಕ್ಕೆ ದಕ್ಕೆ ಆಗಬಾರದು: ಬಿಡದಿ ಟೌನ್ ಶಿಪ್ ಕುರಿತು ಸತೀಶ್ ಜಾರಕಿಹೊಳಿ ಹೇಳಿದ್ದೇನು..?

ಸ್ಕೀಮ್ ಮಾಡುವಾಗ ಸರ್ಕಾರಕ್ಕೆ ದಕ್ಕೆ ಆಗಬಾರದು: ಬಿಡದಿ ಟೌನ್ ಶಿಪ್ ಕುರಿತು ಸತೀಶ್ ಜಾರಕಿಹೊಳಿ ಹೇಳಿದ್ದೇನು..?

For Dai;y Updates Join Our whatsapp Group

Spread the love

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಯೋಜಿಸಲಾಗಿರುವ ಟೌನ್‌ಶಿಪ್ ಯೋಜನೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದೇ ಯೋಜನೆ ಕೈಗೊಳ್ಳುವ ವೇಳೆ ಅದು ಸರ್ಕಾರಕ್ಕೆ ಆರ್ಥಿಕ ಹೊರೆ ಆಗಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಪಕ್ಷದ ಭವಿಷ್ಯವೂ ಇಂತಹ ಯೋಜನೆಗಳ ಯಶಸ್ಸಿನ ಮೇಲೆ ಅವಲಂಬಿತವಾಗಿದೆ ಎಂದು ಅವರು ಹೇಳಿದರು.

“ಯಾವುದೋ ಒಂದು ಯೋಜನೆ ಮಾಡುತ್ತೇವೆ ಎಂದು ಸರ್ಕಾರಕ್ಕೆ ಹೊರೆ ಆಗಬಾರದು. ಅಂತಹ ಸಮಸ್ಯೆಗಳು ಉದ್ಭವವಾಗಬಾರದು,” ಎಂದು ಸತೀಶ್ ಜಾರಕಿಹೊಳಿ ಹೇಳಿದರು. ಶನಿವಾರ ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರು ಏನು ಹೋರಾಟ ಮಾಡುತ್ತಾರೋ ಅದು ಅವರ ಪಕ್ಷದ ವಿಷಯ. ಆದರೆ ಅದು ಒಳ್ಳೆಯದಾಗಬೇಕು, ಕೆಟ್ಟ ಪರಿಣಾಮ ಬೀರಬಾರದು ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ಕುರಿತು ಪರ–ವಿರೋಧ ಅಭಿಪ್ರಾಯಗಳ ಕುರಿತು ಚರ್ಚೆ ಅಗತ್ಯವಿದೆ ಎಂದು ಹೇಳಿದ ಅವರು, ಪಕ್ಷದ ಹಿತದೃಷ್ಟಿಯಿಂದ ಸಮಗ್ರ ಪರಿಶೀಲನೆ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಇದಲ್ಲದೆ ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ ಜಮೀರ್ ಅಹ್ಮದ್ ಅವರಿಗೆ ಹೆಚ್ಚುವರಿ ಸ್ಥಾನ ನೀಡುವ ಕುರಿತು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರ ಬಳಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ ಎಂದು ಹೇಳಿದರು.

ಮುಸ್ಲಿಂ ಸಮುದಾಯದ ಮತಬಲವನ್ನು ಗಮನದಲ್ಲಿಟ್ಟುಕೊಂಡು ಜಮೀರ್ ಅಹ್ಮದ್ ಹಾಗೂ ಮತ್ತೊಬ್ಬರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾಗಿ ಅವರು ತಿಳಿಸಿದ್ದಾರೆ. ಹಿಂದಿನ ಅವಧಿಯಲ್ಲಿ ಇಬ್ಬರಿಗೆ ಅವಕಾಶ ನೀಡಲಾಗಿತ್ತು, ಈ ಬಾರಿ ಮೂವರಿಗೆ ಅವಕಾಶ ನೀಡುವ ಕುರಿತು ಚರ್ಚೆ ನಡೆದಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!