HomeWorld Newsಕದನ ವಿರಾಮದ ಕೆಲವೇ ಗಂಟೆಗಳಲ್ಲಿ ಲೆಬನಾನ್ ಮೇಲೆ ಮತ್ತೆ ಇಸ್ರೇಲ್ ದಾಳಿ! 5 ಮಂದಿ ಸಾವು

ಕದನ ವಿರಾಮದ ಕೆಲವೇ ಗಂಟೆಗಳಲ್ಲಿ ಲೆಬನಾನ್ ಮೇಲೆ ಮತ್ತೆ ಇಸ್ರೇಲ್ ದಾಳಿ! 5 ಮಂದಿ ಸಾವು

For Dai;y Updates Join Our whatsapp Group

Spread the love

ಬೈರುತ್: ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಜ್ಬೊಲ್ಲಾ ನಡುವಿನ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲೇ ಲೆಬನಾನ್ ಮೇಲೆ ಮತ್ತೆ ಇಸ್ರೇಲ್ ದಾಳಿ ನಡೆಸಿದೆ. ದಕ್ಷಿಣ ಲೆಬನಾನ್‌ನ ನಬತಿಯೇಹ್ ಪ್ರದೇಶದಲ್ಲಿ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಐವರು ಮೃತಪಟ್ಟಿದ್ದು, ಹಲವು ಪ್ರದೇಶಗಳಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಲೆಬನಾನ್ ಅಧಿಕಾರಿಗಳ ಮಾಹಿತಿ ಪ್ರಕಾರ, ಶನಿವಾರ ಮುಂಜಾನೆವರೆಗೆ ಇಸ್ರೇಲಿ ಯುದ್ಧ ವಿಮಾನಗಳು ಹಾಗೂ ಡ್ರೋನ್‌ಗಳು ನಬತಿಯೇಹ್ ಪ್ರದೇಶದ ವಸತಿ ಕಟ್ಟಡಗಳು ಮತ್ತು ಮನೆಗಳನ್ನು ಗುರಿಯಾಗಿಸಿಕೊಂಡು ಸರಣಿ ವೈಮಾನಿಕ ದಾಳಿ ನಡೆಸಿವೆ. ದಾಳಿಯಿಂದ ಹಲವು ಕಟ್ಟಡಗಳು ಹಾನಿಗೊಳಗಾಗಿದ್ದು, ನಾಗರಿಕರಲ್ಲಿ ಆತಂಕ ಮನೆ ಮಾಡಿದೆ.

ದಕ್ಷಿಣ ಲೆಬನಾನ್‌ನಲ್ಲಿ ಹಲವು ದಿನಗಳಿಂದ ನಡೆದಿದ್ದ ಭೀಕರ ಸಂಘರ್ಷದ ಬಳಿಕ ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಜ್ಬೊಲ್ಲಾ ಸಂಘಟನೆ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದವು. ಅಮೆರಿಕ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ, ಇರಾನ್ ಸಹಕಾರದೊಂದಿಗೆ ಈ ಒಪ್ಪಂದ ಜಾರಿಗೆ ಬಂದಿದೆ ಎಂದು ಅಮೆರಿಕದ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದರು.

ಇದಕ್ಕೂ ಮುನ್ನ ಶುಕ್ರವಾರ ನಬತಿಯೇಹ್ ಜಿಲ್ಲೆಯ ವಿವಿಧ ಭಾಗಗಳ ಮೇಲೆ ನಡೆದ ಇಸ್ರೇಲ್ ದಾಳಿಯಲ್ಲಿ 16 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಕೆಲವು ಮಂದಿ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಶಂಕೆಯೂ ವ್ಯಕ್ತವಾಗಿತ್ತು. ರಕ್ಷಣಾ ಕಾರ್ಯಾಚರಣೆಗಳು ಇನ್ನೂ ಮುಂದುವರಿದಿವೆ.

ಅಮೆರಿಕ ಹಾಗೂ ಇರಾನ್ ಮಧ್ಯಸ್ಥಿಕೆಯಲ್ಲಿ ನಡೆದ ಶಾಂತಿ ಒಪ್ಪಂದದ ಪ್ರಕಾರ, ಲೆಬನಾನ್ ಸೇರಿದಂತೆ ಎಲ್ಲಾ ಪ್ರದೇಶಗಳಲ್ಲಿ ತಕ್ಷಣವೇ ಮಿಲಿಟರಿ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಬೇಕು ಹಾಗೂ ಲೆಬನಾನ್‌ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಆದರೆ ಕದನ ವಿರಾಮ ಜಾರಿಯಾದ ಕೆಲವೇ ಗಂಟೆಗಳಲ್ಲಿ ಇಸ್ರೇಲ್ ಮತ್ತೆ ದಾಳಿ ನಡೆಸಿರುವುದು ಶಾಂತಿ ಒಪ್ಪಂದದ ಭವಿಷ್ಯದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುವ ಸಾಧ್ಯತೆಯ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!