HomeKarnataka Newsರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಮುಂದಿನ 24 ಗಂಟೆ ಭಾರೀ ಮಳೆ ಸಾಧ್ಯತೆ!

ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಮುಂದಿನ 24 ಗಂಟೆ ಭಾರೀ ಮಳೆ ಸಾಧ್ಯತೆ!

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ನಿರೀಕ್ಷೆಯಿದ್ದು, ನಾಲ್ಕೂ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಇನ್ನು ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂಗಾರು ತುಸು ನಿಧಾನವಾಗಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆಗಳಲ್ಲಿ ಮಳೆಯಾಗಲಿದೆ.

ಬಿರುಗಾಳಿ, ಗುಡುಗು ಮತ್ತು ಸಿಡಿಲಿನ ಭೀತಿ ಇರುವುದರಿಂದ ಸಾರ್ವಜನಿಕರು, ರೈತರು ಹಾಗೂ ಮೀನುಗಾರರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!