HomeBengaluru Newsಬೆಂಗಳೂರು ನಿವಾಸಿಗಳೇ ಗಮನಿಸಿ: ಜೂನ್ 22 ಮತ್ತು 23ರಂದು ವಿದ್ಯುತ್ ವ್ಯತ್ಯಯ, ಈ ಪ್ರದೇಶಗಳಲ್ಲಿ ಪವರ್...

ಬೆಂಗಳೂರು ನಿವಾಸಿಗಳೇ ಗಮನಿಸಿ: ಜೂನ್ 22 ಮತ್ತು 23ರಂದು ವಿದ್ಯುತ್ ವ್ಯತ್ಯಯ, ಈ ಪ್ರದೇಶಗಳಲ್ಲಿ ಪವರ್ ಕಟ್

For Dai;y Updates Join Our whatsapp Group

Spread the love

ಬೆಂಗಳೂರು: ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ನಗರದ ವಿವಿಧ ಭಾಗಗಳಲ್ಲಿ ಜೂನ್ 22 (ಸೋಮವಾರ) ಮತ್ತು ಜೂನ್ 23 (ಮಂಗಳವಾರ) ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಕಡಿತವಾಗುವ ಸಾಧ್ಯತೆ ಇದೆ.

ಸೋಲದೇವನಹಳ್ಳಿ–ಹೆಸರಘಟ್ಟ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಸೋಲದೇವನಹಳ್ಳಿ, ಹೆಸರಘಟ್ಟ, ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿ.ಬಿ. ಕ್ರಾಸ್, ಬಿಲಿಜಾಜಿ ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಬ್ರದರ್ಸ್ ಕಾಲೋನಿ, ಕೃಷ್ಣ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಶಿವಕುಮಾರಸ್ವಾಮೀಜಿ ಲೇಔಟ್,

ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ ಇಲಾಖೆ, ಶಿವಕೋಟೆ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಬ್ಯಾಲಕೆರೆ, ಆಚಾರ್ಯ ಕಾಲೇಜು ಮುಖ್ಯ ರಸ್ತೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಸೋಮವಾರ ವಿದ್ಯುತ್ ಕಡಿತವಾಗುವ ಪ್ರಮುಖ ಪ್ರದೇಶಗಳು

ಔಟರ್ ರಿಂಗ್ ರೋಡ್ (ORR) ವಲಯ

ಸೆಸ್ನಾ ಬಿಸಿನೆಸ್ ಪಾರ್ಕ್, ಎಕ್ಸೋರಾ ಬಿಸಿನೆಸ್ ಪಾರ್ಕ್, ಶೋಭಾ ಅಪಾರ್ಟ್‌ಮೆಂಟ್ಸ್, ವಿಕಾಸ್ ಟೆಲಿಕಾಂ, ಐಬಿಸ್ ಹೋಟೆಲ್, ತಕ್ಷಶಿಲಾ ಹೆಲ್ತ್‌ಕೇರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಪೂರ್ವ ವಲಯ

ಶೋಭಾ ಕ್ರಿಸಾಂಥಿಮಮ್, ಗೋವಿಂದಪುರ, ಕಾರ್ಲೆ, ಬೃಂದಾವನ ನಗರ, ಗಾಂಧಿನಗರ, ಹೆಗ್ಡೆ ನಗರ, ಚಂದ್ರಿಕಾ ಸೋಪ್ ಫ್ಯಾಕ್ಟರಿ, ಬಿಎಂಟಿಸಿ ಡಿಪೋ ಸೇರಿದಂತೆ ಹಲವು ಪ್ರದೇಶಗಳು.

ಕೇಂದ್ರ ವಲಯ

ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಮ್ಯೂಸಿಯಂ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಕಾನ್ವೆಂಟ್ ರಸ್ತೆ, ಕೇಂಬ್ರಿಡ್ಜ್ ಲೇಔಟ್, ಗೌತಮಪುರ, ಆರ್ಟಿಲರಿ ರಸ್ತೆ, ಎಂವಿ ಗಾರ್ಡನ್, ಜೋಗುಪಾಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ದಕ್ಷಿಣ ವಲಯ

ಅಂಜನಾಪುರ, ಆವಲಹಳ್ಳಿ, ರಾಘವನಪಾಳ್ಯ, ನಾರಾಯಣನಗರ, ಅಮೃತನಗರ, ವಡ್ಡರಪಾಳ್ಯ, ಕೆಂಬತ್ತಹಳ್ಳಿ, ತಲಘಟ್ಟಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಪಶ್ಚಿಮ ವಲಯ

ಮಲ್ಲೇಶ್ವರಂ, ವೈಯಾಲಿಕಾವಲ್, ಕೋದಂಡರಾಮಪುರ, ಅಂಬೇಡ್ಕರ್ ನಗರ, ಮತ್ತಿಕೆರೆ, ಜೆ.ಪಿ. ಪಾರ್ಕ್, ಯಶವಂತಪುರ, ಎಚ್‌ಎಂಟಿ ಲೇಔಟ್, ಗೋಕುಲ 1ನೇ ಹಂತ, ಎಸ್‌ಬಿಎಂ ಕಾಲೋನಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಮಂಗಳವಾರ ವಿದ್ಯುತ್ ಕಡಿತವಾಗುವ ಪ್ರದೇಶಗಳು

ಕೋರಮಂಗಲ ಹಾಗೂ ಸುತ್ತಮುತ್ತ

ಕೋರಮಂಗಲ 3, 4, 5 ಮತ್ತು 6ನೇ ಬ್ಲಾಕ್, ಕೋರಮಂಗಲ ಕೈಗಾರಿಕಾ ಪ್ರದೇಶ, ಮಡಿವಾಳ, ವೆಂಕಟೇಶ್ವರ ಲೇಔಟ್, ಚಿಕ್ಕಡುಗೋಡಿ, ಜೋಗಿ ಕಾಲೋನಿ, ಆಡುಗೋಡಿ, ಸೇಂಟ್ ಜಾನ್ಸ್ ಆಸ್ಪತ್ರೆ ಮತ್ತು ಸಿಬ್ಬಂದಿ ಕ್ವಾರ್ಟರ್ಸ್, ಬನ್ನೇರುಘಟ್ಟ ರಸ್ತೆ, ಕೆಎಚ್‌ಬಿ ಕಾಲೋನಿ, ಕಾವೇರಿ ಲೇಔಟ್, ಎಸ್.ಜಿ. ಪಾಳ್ಯ, ಮಡಿವಾಳ ಮಾರುಕಟ್ಟೆ, ಜಕ್ಕಸಂದ್ರ ವಿಸ್ತರಣೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರಿಗೆ ಬೆಸ್ಕಾಂ ಮನವಿ

ವಿದ್ಯುತ್ ವ್ಯತ್ಯಯದ ಅವಧಿಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ವಿದ್ಯುತ್ ಆಧಾರಿತ ಕೆಲಸಗಳನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಬೆಸ್ಕಾಂ ಸಾರ್ವಜನಿಕರಿಗೆ ಮನವಿ ಮಾಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!