HomeBengaluru Newsಬೆಂಗಳೂರಿಗರ ಗಮನಕ್ಕೆ! ಇಂದು, ನಾಳೆ ಪವರ್ ಕಟ್, ಕರೆಂಟ್ ಇಲ್ಲದ ಏರಿಯಾಗಳ ಲಿಸ್ಟ್ ಇಲ್ಲಿದೆ

ಬೆಂಗಳೂರಿಗರ ಗಮನಕ್ಕೆ! ಇಂದು, ನಾಳೆ ಪವರ್ ಕಟ್, ಕರೆಂಟ್ ಇಲ್ಲದ ಏರಿಯಾಗಳ ಲಿಸ್ಟ್ ಇಲ್ಲಿದೆ

For Dai;y Updates Join Our whatsapp Group

Spread the love

ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ತುರ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟ್ರಾನ್ಸ್‌ಫಾರ್ಮರ್‌ಗಳ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹಲವು ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ಬಿಡುಗಡೆ ಮಾಡಿರುವ ಅಧಿಕೃತ ಪ್ರಕಟಣೆಯ ಪ್ರಕಾರ, ಜೂನ್ 22ರಂದು ಬೆಳಿಗ್ಗೆ 9 ಗಂಟೆಯಿಂದ ಸುಮಾರು 7 ಗಂಟೆಗಳ ಕಾಲ ವಿವಿಧ ವಲಯಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ಕಾಮಗಾರಿಗಳನ್ನು ಸುಗಮವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಮುಂಚಿತವಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿರಲು ಸೂಚಿಸಲಾಗಿದೆ.

ಉತ್ತರ ವಲಯದ ಸೋಲದೇವನಹಳ್ಳಿ, ಹೆಸರಘಟ್ಟ, ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿ.ಬಿ. ಕ್ರಾಸ್, ಬಿಲಿಜಾಜಿ ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಬ್ರದರ್ಸ್ ಕಾಲೋನಿ, ಕೃಷ್ಣ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಶಿವಕುಮಾರಸ್ವಾಮೀಜಿ ಲೇಔಟ್, ಶಿವಕೋಟೆ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಬ್ಯಾಲಕೆರೆ, ಸೋಮಶೆಟ್ಟಿಹಳ್ಳಿ, ದಾಸೇನಹಳ್ಳಿ, ಗುಡ್ಡದಹಳ್ಳಿ ಹಾಗೂ ಹೊಸಹಳ್ಳಿ ಪಾಳ್ಯ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ.

ಇದರ ಜೊತೆಗೆ ಔಟರ್ ರಿಂಗ್ ರೋಡ್ ಸುತ್ತಮುತ್ತಲಿನ ಸೆಸ್ನಾ ಬಿಸಿನೆಸ್ ಪಾರ್ಕ್, ಎಕ್ಸೋರಾ ಬಿಸಿನೆಸ್ ಪಾರ್ಕ್, ಶೋಭಾ ಅಪಾರ್ಟ್‌ಮೆಂಟ್ಸ್, ವಿಕಾಸ್ ಟೆಲಿಕಾಂ, ಐಬಿಸ್ ಹೋಟೆಲ್ ಮತ್ತು ತಕ್ಷಶಿಲಾ ಹೆಲ್ತ್‌ಕೇರ್ ಪ್ರದೇಶಗಳಲ್ಲಿಯೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಪೂರ್ವ ವಲಯದ ಗೋವಿಂದಪುರ, ಕಾರ್ಲೆ, ಬೃಂದಾವನ ನಗರ, ಗಾಂಧಿನಗರ, ಹೆಗ್ಡೆ ನಗರ, ಬಿಎಂಟಿಸಿ ಡಿಪೋ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಮತ್ತು ಕೇಂದ್ರ ವಲಯದ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಮ್ಯೂಸಿಯಂ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಹೇಸ್ ರಸ್ತೆ, ಕಾನ್ವೆಂಟ್ ರಸ್ತೆ, ರೆಸಿಡೆನ್ಸಿ ರಸ್ತೆ, ಕೇಂಬ್ರಿಡ್ಜ್ ಲೇಔಟ್, ಗೌತಮಪುರ, ಆರ್ಟಿಲರಿ ರಸ್ತೆ, ಎಂವಿ ಗಾರ್ಡನ್ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳು ಪವರ್ ಕಟ್ ವ್ಯಾಪ್ತಿಗೆ ಒಳಪಡಲಿವೆ.

ದಕ್ಷಿಣ ವಲಯದ ಅಂಜನಾಪುರ, ಆವಲಹಳ್ಳಿ, ರಾಘವನಪಾಳ್ಯ, ನಾಗೇಗೌಡನ ಪಾಳ್ಯ, ನಾರಾಯಣನಗರ, ಅಮೃತನಗರ, ವಡ್ಡರಪಾಳ್ಯ, ಕೆಂಬತ್ತಹಳ್ಳಿ, ತಲಘಟ್ಟಪುರ ಹಾಗೂ ಸುತ್ತಮುತ್ತಲಿನ ಬಡಾವಣೆಗಳಲ್ಲಿಯೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇನ್ನು ಪಶ್ಚಿಮ ವಲಯದ ಮಲ್ಲೇಶ್ವರಂ, ವೈಯಾಲಿಕಾವಲ್, ಕೋದಂಡರಾಮಪುರ, ಅಂಬೇಡ್ಕರ್ ನಗರ, ಮತ್ತಿಕೆರೆ, ಮೋಹನ್ ಕುಮಾರ್ ನಗರ, ಜೆ.ಪಿ. ಪಾರ್ಕ್, ಯಶವಂತಪುರ, ಎಚ್‌ಎಂಟಿ ಲೇಔಟ್, ಗೋಕುಲ 1ನೇ ಹಂತ, ಎಸ್‌ಬಿಎಂ ಕಾಲೋನಿ ಮತ್ತು ಸಂಜೀವಪ್ಪ ಕಾಲೋನಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ಜೂನ್ 23ರಂದು ಕೋರಮಂಗಲ 3, 4, 5 ಮತ್ತು 6ನೇ ಬ್ಲಾಕ್, ಕೋರಮಂಗಲ ಕೈಗಾರಿಕಾ ಪ್ರದೇಶ, ಮಡಿವಾಳ, ವೆಂಕಟೇಶ್ವರ ಲೇಔಟ್, ಚಿಕ್ಕಡುಗೋಡಿ, ಜೋಗಿ ಕಾಲೋನಿ, ಆಡುಗೋಡಿ, ಬನ್ನೇರುಘಟ್ಟ ರಸ್ತೆ, ಕೆಎಚ್‌ಬಿ ಕಾಲೋನಿ, ಕಾವೇರಿ ಲೇಔಟ್, ಎಸ್.ಜಿ. ಪಾಳ್ಯ, ಮಡಿವಾಳ ಮಾರುಕಟ್ಟೆ, ಕೋರಮಂಗಲ ವಿಸ್ತರಣೆ ಹಾಗೂ ಜಕ್ಕಸಂದ್ರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿಗದಿತ ವಿದ್ಯುತ್ ಕಡಿತ ಜಾರಿಯಲ್ಲಿರಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ನಿಗದಿತ ಪ್ರದೇಶಗಳನ್ನು ಹೊರತುಪಡಿಸಿ ಇತರೆಡೆಗಳಲ್ಲಿ ತಾಂತ್ರಿಕ ಕಾರಣಗಳಿಂದ ವಿದ್ಯುತ್ ವ್ಯತ್ಯಯ ಉಂಟಾದಲ್ಲಿ ಸಾರ್ವಜನಿಕರು ಬೆಸ್ಕಾಂ ಮಿತ್ರ ಮೊಬೈಲ್ ಅಪ್ಲಿಕೇಶನ್ ಅಥವಾ 24 ಗಂಟೆಗಳ ಉಚಿತ ಸಹಾಯವಾಣಿ ಸಂಖ್ಯೆ 1912 ಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ.

ವಿದ್ಯುತ್ ಕಡಿತದ ಅವಧಿಯಲ್ಲಿ ಅಗತ್ಯ ವಿದ್ಯುತ್ ಉಪಕರಣಗಳ ಬಳಕೆ, ನೀರು ಸಂಗ್ರಹಣೆ ಹಾಗೂ ಇತರೆ ಅಗತ್ಯ ಸಿದ್ಧತೆಗಳನ್ನು ಮುಂಚಿತವಾಗಿಯೇ ಮಾಡಿಕೊಂಡು ಸಹಕರಿಸುವಂತೆ ಬೆಸ್ಕಾಂ ಸಾರ್ವಜನಿಕರಿಗೆ ಮನವಿ ಮಾಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!