HomeKarnataka Newsಸದಾಶಿವನಗರ ನಿವಾಸದಲ್ಲಿ ಇನ್ನು ಭೇಟಿ ಇಲ್ಲ; 'ಕೃಷ್ಣಾ'ದಲ್ಲೇ ಸಾರ್ವಜನಿಕರ ಭೇಟಿ - ಸಿಎಂ ಡಿ.ಕೆ. ಶಿವಕುಮಾರ್

ಸದಾಶಿವನಗರ ನಿವಾಸದಲ್ಲಿ ಇನ್ನು ಭೇಟಿ ಇಲ್ಲ; ‘ಕೃಷ್ಣಾ’ದಲ್ಲೇ ಸಾರ್ವಜನಿಕರ ಭೇಟಿ – ಸಿಎಂ ಡಿ.ಕೆ. ಶಿವಕುಮಾರ್

For Dai;y Updates Join Our whatsapp Group

ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇನ್ನು ಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ತಮ್ಮ ಗೃಹ ಕಚೇರಿ ‘ಕೃಷ್ಣಾ’ದಲ್ಲೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿ, ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮನ್ನು ಭೇಟಿ ಮಾಡಲು ಸದಾಶಿವನಗರ ನಿವಾಸಕ್ಕೆ ಬರುವ ಬದಲು, ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ಕ್ಕೆ ಆಗಮಿಸುವಂತೆ ಅವರು ಮನವಿ ಮಾಡಿದ್ದಾರೆ.

ಅಲ್ಲದೆ, ಯಾರೂ ಸದಾಶಿವನಗರ ನಿವಾಸಕ್ಕೆ ಬರುವ ತೊಂದರೆ ತೆಗೆದುಕೊಳ್ಳಬಾರದು ಹಾಗೂ ಈ ನಿರ್ಧಾರವನ್ನು ಅನ್ಯಥಾ ಭಾವಿಸಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಮುಂದೆ ಎಲ್ಲ ಸಾರ್ವಜನಿಕ ಭೇಟಿಗಳು ಹಾಗೂ ಮನವಿ ಸ್ವೀಕಾರ ಸೇರಿದಂತೆ ಅಧಿಕೃತ ಭೇಟಿಗಳು ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲೇ ನಡೆಯಲಿವೆ ಎಂದು ತಿಳಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img