ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಕೆ. ಲಮಾಣಿ ಆಗ್ರಹಿಸಿದ್ದಾರೆ.
ಪ್ರಕಟಣೆ ನೀಡಿರುವ ಅವರು, ಎಚ್.ಕೆ. ಪಾಟೀಲ ಅವರು ಈ ಹಿಂದೆ ನೀರಾವರಿ, ಕೃಷಿ, ಜವಳಿ ಸೇರಿದಂತೆ ಹಲವು ಪ್ರಮುಖ ಇಲಾಖೆಗಳಲ್ಲಿ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಗದಗ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿರುವುದು ಅವರ ಕಾರ್ಯಕ್ಷಮತೆ ಮತ್ತು ಜನಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ಪಕ್ಷದ ನಿಷ್ಠಾವಂತ ಹಾಗೂ ಅನುಭವಿ ರಾಜಕಾರಣಿಯಾಗಿರುವ ಎಚ್.ಕೆ. ಪಾಟೀಲ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಹೈಕಮಾಂಡ್ ಸಚಿವ ಸ್ಥಾನ ನೀಡುವ ಮೂಲಕ ಗೌರವಿಸಬೇಕು ಎಂದು ಒತ್ತಾಯಿಸಿದ್ದಾರೆ.



