ಬೆಂಗಳೂರು: 2025-26ನೇ ಸಾಲಿನ ಡಿಜಿ & ಐಜಿಪಿ ಕಮಾಂಡೇಷನ್ ಡಿಸ್ಕ್ ಪ್ರಶಸ್ತಿಗೆ ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ವರ್ಷಪೂರ್ತಿ ಸಲ್ಲಿಸಿದ ಅತ್ಯುತ್ತಮ ಸೇವೆ, ಕರ್ತವ್ಯ ನಿಷ್ಠೆ ಹಾಗೂ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಡಿಜಿ ಹಾಗೂ ಐಜಿಪಿ ಎಂ.ಎ. ಸಲೀಂ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಐಜಿಪಿ ಶಶಿಕುಮಾರ್, ಡಿಐಜಿಪಿ ಭೀಮಾಶಂಕರ್ ಗುಳೇದ್, ಡಿಸಿಪಿ ಅಕ್ಷಯ್ ಮಚೀಂದ್ರ ಹಾಗೂ ಎಸಿಪಿ ರಾಜೇಶ್ ಎಲ್.ವೈ ಸೇರಿದಂತೆ ಒಟ್ಟು 200 ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಾನ ಪಡೆದಿದ್ದಾರೆ.
ಈ ಪ್ರಶಸ್ತಿ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಷಮತೆ, ಸೇವಾ ಮನೋಭಾವ ಹಾಗೂ ಇಲಾಖೆಗೆ ನೀಡಿದ ಕೊಡುಗೆಯನ್ನು ಗುರುತಿಸಿ ನೀಡುವ ಪ್ರತಿಷ್ಠಿತ ಗೌರವಗಳಲ್ಲಿ ಒಂದಾಗಿದೆ.



