
-ಎಸಿ ದಾಳಿ, 200 ಚೀಲ ಪಡಿತರ ಅಕ್ಕಿ ವಶಕ್ಕೆ
Advertisement
ವಿಜಯಸಾಕ್ಷಿ ಸುದ್ದಿ,
ಕೊಪ್ಪಳ: ಭತ್ತದ ಕಣಜ ಗಂಗಾವತಿಯಲ್ಲಿ ಅಕ್ರಮವಾಗಿ ಬಚ್ಚಿಟ್ಟಿದ್ದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.
ನೂತನ ಉಪವಿಭಾಗಾಧಿಕಾರಿ ಬಸಣ್ಯಪ್ಪ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ತಂಡ ಗಂಗಾವತಿ ಎಪಿಎಂಸಿ ಗೋದಾಮಿನ ಮೇಲೆ ದಾಳಿ ನಡೆಸಿದಾಗ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದು ಪತ್ತೆಯಾಗಿದೆ.
ಗೋದಾಮಿನ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಅಂದಾಜು 200 ಚೀಲ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಅಕ್ಕಿಯ ಅಕ್ರಮ ಸಾಗಣೆಗೆ ಬಳಸಿದ್ದ ಲಾರಿ ಮತ್ತು ಆಟೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಉಪವಿಭಾಗಾಧಿಕಾರಿ ಬಸಣ್ಯಪ್ಪ ಕಲಶೆಟ್ಟಿ, ಗುರುವಾರ ರಾತ್ರಿ ದಾಳಿ ಮಾಡಿದ್ದು ನಿಜ. ಅದಿನ್ನೂ ತನಿಖೆಯ ಹಂತದಲ್ಲಿದೆ. ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮಾಹಿತಿ ನೀಡುವುದಾಗಿ ತಿಳಿಸಿದರು.