HomeKarnataka Newsಸತೀಶ್ ಜಾರಕಿಹೊಳಿ ಕುಟುಂಬಕ್ಕೆ ಇಡಿ ಶಾಕ್: ವೈ. ಮಂಜುನಾಥ್ ಮನೆ ಸೇರಿ 6 ಕಡೆ ಏಕಕಾಲದ...

ಸತೀಶ್ ಜಾರಕಿಹೊಳಿ ಕುಟುಂಬಕ್ಕೆ ಇಡಿ ಶಾಕ್: ವೈ. ಮಂಜುನಾಥ್ ಮನೆ ಸೇರಿ 6 ಕಡೆ ಏಕಕಾಲದ ದಾಳಿ

For Dai;y Updates Join Our whatsapp Group

Spread the love

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಹೋದರಿಯ ಪತಿಯಾಗಿರುವ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ರಿಗೆ ಸೇರಿದ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶುಕ್ರವಾರ ಮುಂಜಾನೆ ದಾಳಿ ನಡೆಸಿದ್ದಾರೆ.

ವೈ. ಮಂಜುನಾಥ್ ಅವರಿಗೆ ಸಂಬಂಧಿಸಿದ ಒಟ್ಟು ಆರು ಸ್ಥಳಗಳಲ್ಲಿ ಏಕಕಾಲಕ್ಕೆ ಕಾರ್ಯಾಚರಣೆ ನಡೆಸಿದ ಇಡಿ ಅಧಿಕಾರಿಗಳು, ಮಹತ್ವದ ದಾಖಲೆಗಳು ಹಾಗೂ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಗೋವಾ ಹಾಗೂ ಬೆಂಗಳೂರಿನ ಇಡಿ ಅಧಿಕಾರಿಗಳ ಜಂಟಿ ತಂಡ ಬೆಳಗ್ಗೆಯೇ ಕಾರ್ಯಾಚರಣೆ ಆರಂಭಿಸಿದ್ದು, ಬೆಳಗಾವಿಯ ದೂರದರ್ಶನ ಕೇಂದ್ರದ ಸಮೀಪ ಇರುವ ಮಂಜುನಾಥ್ ಅವರ ನಿವಾಸಕ್ಕೂ ಭೇಟಿ ನೀಡಿ ಶೋಧ ಕಾರ್ಯ ಕೈಗೊಂಡಿದೆ.

ತನಿಖಾ ಪ್ರಕ್ರಿಯೆ ಸುಗಮವಾಗಿ ನಡೆಯುವಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ 10ಕ್ಕೂ ಹೆಚ್ಚು ಅರೆಸೇನಾ ಪಡೆಯ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಹಲವು ವರ್ಷಗಳಿಂದ ಅಬಕಾರಿ ಇಲಾಖೆಯಲ್ಲಿ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ಆರು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಆಸ್ತಿ-ಪಾಸ್ತಿ ವಿವರಗಳು, ಬ್ಯಾಂಕ್ ಖಾತೆಗಳು ಹಾಗೂ ಇತರೆ ಹಣಕಾಸು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಬಳ್ಳಾರಿಯ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರರಾಗಿರುವ ವೈ. ಮಂಜುನಾಥ್ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಬೇನಾಮಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜಮೀನು, ಬಾರ್ ಮತ್ತು ರೆಸ್ಟೋರೆಂಟ್‌ ಸೇರಿದಂತೆ ಹಲವು ಆಸ್ತಿಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!