ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲೂಕಿನ ರಂಗ ಚೈತ್ರ ಸಾಂಸ್ಕೃತಿಕ ಕಲಾ ಟ್ರಸ್ಟ್‌ನ ತಾಲೂಕು ಅಧ್ಯಕ್ಷರಾಗಿ ಹನಸಿ ಗ್ರಾಮದ ಕದಮ್ಮನವರ ಕೊಟ್ರೇಶ್ ಆಯ್ಕೆಯಾಗಿದ್ದಾರೆ.
ಪಟ್ಟಣದ ರಾಮನಗರದಲ್ಲಿ ಮಂಗಳವಾರ ಸಂಜೆ ನಡೆದ ಟ್ರಸ್ಟ್ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಟ್ರಸ್ಟ್‌ನ ಗೌರವಾಧ್ಯಕ್ಷರಾಗಿ ಸಿ. ಶಿವಮೂರ್ತಿ, ಅಧ್ಯಕ್ಷರಾಗಿ ಕದಮ್ಮನವರ ಕೊಟ್ರೇಶ್, ಹಿರಿಯ ಸಲಹೆಗಾರರಾಗಿ ಸೋಮನಗೌಡರು, ಉಪಾಧ್ಯಕ್ಷರಾಗಿ ಟಿ. ಶೇಖರಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಕೆ. ಪರಶುರಾಮ್, ಸಹ ಕಾರ್ಯದರ್ಶಿಯಾಗಿ ಕೆ. ದೊಡ್ಡಬಸಪ್ಪ, ಖಜಾಂಚಿಯಾಗಿ ಸಿ. ರಮೇಶ್, ಸಂಘಟನಾ ಕಾರ್ಯದರ್ಶಿಯಾಗಿ ಕೆ. ಚಿಕ್ಕನಗೌಡ ಹಾಗೂ ಕೆ. ಕುಬೇರಪ್ಪ, ಕಾನೂನು ಸಲಹೆಗಾರರಾಗಿ ಡಿ. ಉಮಾಶಂಕರ್ ಅವರನ್ನು ಆಯ್ಕೆ ಮಾಡಲಾಯಿತು.
ನೂತನ ಪದಾಧಿಕಾರಿಗಳು ಟ್ರಸ್ಟ್‌ನ ಸಾಂಸ್ಕೃತಿಕ ಹಾಗೂ ಕಲಾ ಚಟುವಟಿಕೆಗಳನ್ನು ಇನ್ನಷ್ಟು ಬಲಪಡಿಸುವ ಸಂಕಲ್ಪ ವ್ಯಕ್ತಪಡಿಸಿದರು.
ಸಭೆಯಲ್ಲಿ ಟ್ರಸ್ಟ್‌ನ ಸದಸ್ಯರು, ಕಲಾಭಿಮಾನಿಗಳು ಹಾಗೂ ವಿವಿಧ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.
“ಗ್ರಾಮೀಣ ಭಾಗದ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ, ಕಲೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಟ್ರಸ್ಟ್ ಮೂಲಕ ಹೆಚ್ಚಿನ ಒತ್ತು ನೀಡಲಾಗುವುದು.”
— ಕದಮ್ಮನವರ ಕೊಟ್ರೇಶ್, ನೂತನ ಅಧ್ಯಕ್ಷರು



