ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರ ನಿವಾಸದಲ್ಲಿ ಉದ್ಯಮಿ ವೈಶಾಕ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ಮುನ್ನ ವೈಶಾಕ್, “ನನಗೆ ಜೀವನವೇ ಸಾಕಾಗಿದೆ, ಬದುಕಲು ಇಷ್ಟವಿಲ್ಲ” ಎಂದು ನಟಿಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ‘ಕ್ಷೇಮವನ’ದಲ್ಲಿದ್ದ ಕೃಷಿ ತಾಪಂಡ, ಯಾವುದೇ ತಪ್ಪು ನಿರ್ಧಾರ ಕೈಗೊಳ್ಳಬೇಡ ಎಂದು ಸಮಾಧಾನಪಡಿಸಿ, ಮನೆಗೆ ಬರುತ್ತಿರುವುದಾಗಿ ತಿಳಿಸಿದ್ದರು.
ಆದರೆ ನಟಿ ಮನೆಗೆ ತಲುಪುವಷ್ಟರಲ್ಲಿ ವೈಶಾಕ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಬಳಿಕ ಕೃಷಿ ತಾಪಂಡ ರಾಜರಾಜೇಶ್ವರಿ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.



