HomeKarnataka Newsಮಾರಾಟಕ್ಕೆ ಸಾಗಿಸುತ್ತಿದ್ದ 32 ಲೀಟರ್ ಸೇಂದಿ ಜಪ್ತಿ: ದ್ವಿಚಕ್ರ ವಾಹನ ಸಮೇತ ವ್ಯಕ್ತಿ ಅರೆಸ್ಟ್!

ಮಾರಾಟಕ್ಕೆ ಸಾಗಿಸುತ್ತಿದ್ದ 32 ಲೀಟರ್ ಸೇಂದಿ ಜಪ್ತಿ: ದ್ವಿಚಕ್ರ ವಾಹನ ಸಮೇತ ವ್ಯಕ್ತಿ ಅರೆಸ್ಟ್!

For Dai;y Updates Join Our whatsapp Group

Spread the love

ಹಗರಿಬೊಮ್ಮನಹಳ್ಳಿ: ಅಕ್ರಮವಾಗಿ ಸೇಂದಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿ, ಆತನಿಂದ 32 ಲೀಟರ್ ಸೇಂದಿ ಹಾಗೂ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ.

ಅಬಕಾರಿ ಅಪರ ಆಯುಕ್ತರು (ಜಾರಿ ಮತ್ತು ಅಪರಾಧ) ಬೆಳಗಾವಿ, ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಹೊಸಪೇಟೆ ವಿಭಾಗ, ಅಬಕಾರಿ ಉಪ ಆಯುಕ್ತರು ವಿಜಯನಗರ ಜಿಲ್ಲೆ ಹಾಗೂ ಅಬಕಾರಿ ಉಪ ಅಧೀಕ್ಷಕರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಜೂನ್ 24ರಂದು ರಾತ್ರಿ ಸುಮಾರು 8.30 ಗಂಟೆಗೆ ತಾಲೂಕಿನ ಹೊಸ ಆನಂದದೇವನಹಳ್ಳಿ ಗ್ರಾಮದ ಚಂದ್ರು ಡಾಬಾ ಸಮೀಪ ಅಬಕಾರಿ ಉಪನಿರೀಕ್ಷಕ-1 ಮಹಾಂತೇಶ್ ಸವಳಿ ಹಾಗೂ ಸಿಬ್ಬಂದಿ ದಾಳಿ ನಡೆಸಿದರು.

ಈ ವೇಳೆ ಕಂದು ಬಣ್ಣದ ಟಿವಿಎಸ್ ಜೂಪಿಟರ್ ಕ್ಲಾಸಿಕ್ (ಕೆಎ-41 ಇವೈ-0511) ದ್ವಿಚಕ್ರ ವಾಹನದಲ್ಲಿ ಮಾರಾಟ ಉದ್ದೇಶದಿಂದ 32 ಲೀಟರ್ ಸೇಂದಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಯಿತು. ಆರೋಪಿಯಿಂದ ಸೇಂದಿ ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯ ವಿರುದ್ಧ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯಕ್ಕೆ ಪ್ರಥಮ ವರ್ತಮಾನ ವರದಿ ಸಲ್ಲಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಅಬಕಾರಿ ಉಪನಿರೀಕ್ಷಕ ಮಹಾಂತೇಶ್ ಸವಳಿ ಹಾಗೂ ವಲಯ ಕಚೇರಿಯ ಸಿಬ್ಬಂದಿ ವಿಠ್ಠಲ್ ಗೋಶ್ಲೀ ಸೇರಿದಂತೆ ಇತರ ಸಿಬ್ಬಂದಿ ಭಾಗವಹಿಸಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!