Home Karnataka News ದೊಡ್ಡಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಕಾರಿನ ಡಿಕ್ಕಿಗೆ ಮಹಿಳೆ ಬಲಿ, ಸ್ಕೂಟರ್ ನಜ್ಜುಗುಜ್ಜು!

ದೊಡ್ಡಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಕಾರಿನ ಡಿಕ್ಕಿಗೆ ಮಹಿಳೆ ಬಲಿ, ಸ್ಕೂಟರ್ ನಜ್ಜುಗುಜ್ಜು!

0
ದೊಡ್ಡಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಕಾರಿನ ಡಿಕ್ಕಿಗೆ ಮಹಿಳೆ ಬಲಿ, ಸ್ಕೂಟರ್ ನಜ್ಜುಗುಜ್ಜು!
Spread the love

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಸಮೀಪ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಪತಿ ಹಾಗೂ ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೋಡುಗರ ಎದೆ ಜಲ್ ಎನಿಸುವಂತಿದೆ.

ಯಲಹಂಕ–ಹಿಂದೂಪುರ ರಾಜ್ಯ ಹೆದ್ದಾರಿಯ ಬಾಶೆಟ್ಟಿಹಳ್ಳಿ ಪೆಟ್ರೋಲ್ ಬಂಕ್ ಸಮೀಪ ಈ ದುರ್ಘಟನೆ ನಡೆದಿದೆ. ಸ್ಕೂಟರ್‌ನಲ್ಲಿ ಕುಟುಂಬದೊಂದಿಗೆ ಪೆಟ್ರೋಲ್ ಹಾಕಿಸಲು ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಸ್ಕೂಟರ್‌ನಲ್ಲಿದ್ದ ರಾಮಾಂಜನೇಯಲು (50), ಅವರ ಪತ್ನಿ ಅನಿತಾ (42) ಹಾಗೂ ಪುತ್ರಿ ವೈಷ್ಣವಿ (12) ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಕೂಡ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಗಾಯಾಳುಗಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅನಿತಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಾಮಾಂಜನೇಯಲು ಹಾಗೂ ಪುತ್ರಿ ವೈಷ್ಣವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಪಘಾತದ ತೀವ್ರತೆಯನ್ನು ಬಿಂಬಿಸಿದೆ. ಪ್ರಕರಣ ಸಂಬಂಧ ದೊಡ್ಡಬಳ್ಳಾಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here