HomePolitics Newsಡಿ.ಕೆ. ಶಿವಕುಮಾರ್ ಜೊತೆ ಯಾವುದೇ ವ್ಯವಹಾರವಿಲ್ಲ; ಅಪಪ್ರಚಾರ ಮಾಡುವವರಿಗೆ ದೇವರೇ ಬುದ್ಧಿ ಕೊಡಲಿ: ಬಿವೈ ವಿಜಯೇಂದ್ರ

ಡಿ.ಕೆ. ಶಿವಕುಮಾರ್ ಜೊತೆ ಯಾವುದೇ ವ್ಯವಹಾರವಿಲ್ಲ; ಅಪಪ್ರಚಾರ ಮಾಡುವವರಿಗೆ ದೇವರೇ ಬುದ್ಧಿ ಕೊಡಲಿ: ಬಿವೈ ವಿಜಯೇಂದ್ರ

For Dai;y Updates Join Our whatsapp Group

ಧರ್ಮಸ್ಥಳ: ನನ್ನ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ರೀತಿಯ ವ್ಯವಹಾರ ಅಥವಾ ಆತ್ಮೀಯತೆ ಇಲ್ಲ. ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಒಬ್ಬ ರಾಜಕಾರಣಿಯಾಗಿ ನೀಡಬೇಕಾದ ಗೌರವವನ್ನು ಮಾತ್ರ ನೀಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದರು.

ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ವಿಜಯೇಂದ್ರ, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಬಳಿಕ ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಅಡ್ಡಮತದಾನಕ್ಕೆ ತಾನೇ ಕಾರಣ ಎಂಬ ರೀತಿಯಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಜೊತೆಯಾಗಿದ್ದಾರೆ ಎಂಬ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ. ಆದರೆ ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ವ್ಯವಹಾರವಿಲ್ಲ. ನನ್ನ ವಿರುದ್ಧ ಅಪಪ್ರಚಾರ ಮಾಡುವವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೂ, ಅಡ್ಡಮತದಾನ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಹಾಗೂ ನನಗೆ ತೀವ್ರ ನೋವುಂಟು ಮಾಡಿದೆ. ಈ ಬೆಳವಣಿಗೆಯಿಂದ ಶಾಸಕಾಂಗ ಪಕ್ಷದ ಸಭೆಯನ್ನು ಧರ್ಮಸ್ಥಳದಲ್ಲೇ ನಡೆಸಿ, ಶಾಸಕರು ಆಣೆ-ಪ್ರಮಾಣ ಮಾಡಬೇಕು ಎಂದು ನಾನು ಹೇಳಿದ್ದು ನಿಜ. ಆದರೆ ಪಕ್ಷದ ಹಿರಿಯರು ನೀಡಿದ ಸಲಹೆಗೆ ಗೌರವ ನೀಡಿ ಆ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ ಎಂದು ತಿಳಿಸಿದರು.

ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದು, ರಾಜ್ಯದಲ್ಲಿ ಉತ್ತಮ ಮಳೆ ಆಗಲಿ, ಜನರ ಸಂಕಷ್ಟ ದೂರವಾಗಲಿ ಹಾಗೂ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಜನಪರ, ಅಭಿವೃದ್ಧಿಪರ ಮತ್ತು ಹಿಂದೂಗಳ ರಕ್ಷಣೆ ಮಾಡುವ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಹಿಂದೆ 17 ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದ ಇತಿಹಾಸವನ್ನು ನೆನಪಿಸಿದರು. ಈಗಿನ ಕಾಂಗ್ರೆಸ್ ಸರ್ಕಾರ ಭ್ರಷ್ಟ, ಜನವಿರೋಧಿ ಹಾಗೂ ರೈತ ವಿರೋಧಿ ಆಡಳಿತ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಜನರು ಮತ್ತು ಬಿಜೆಪಿ ಕಾರ್ಯಕರ್ತರ ಶಕ್ತಿಯಿಂದ ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img