HomeKarnataka Newsಕರ್ನಾಟಕದಲ್ಲಿ ಮುಂದಿನ 7 ದಿನ ಭಾರಿ ಮಳೆ: ಕರಾವಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರು ಸೇರಿ ಹಲವು...

ಕರ್ನಾಟಕದಲ್ಲಿ ಮುಂದಿನ 7 ದಿನ ಭಾರಿ ಮಳೆ: ಕರಾವಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ

For Dai;y Updates Join Our whatsapp Group

ಬೆಂಗಳೂರು: ಮುಂಗಾರು ಮಳೆಯ ಅಬ್ಬರದ ನಡುವೆಯೇ ಕರ್ನಾಟಕದಲ್ಲಿ ಮುಂದಿನ ಏಳು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಜೂನ್ 27ರಂದು ಬಿಡುಗಡೆಗೊಂಡ ಹವಾಮಾನ ವರದಿ ಪ್ರಕಾರ,

ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಜೂನ್ 30ರಿಂದ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಮುಂದಿನ ಏಳು ದಿನಗಳ ಕಾಲ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಜೂನ್ 27ರಿಂದ 30ರವರೆಗೆ ಭಾರಿ ಮಳೆಯೊಂದಿಗೆ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಜುಲೈ 1ರಿಂದ 3ರವರೆಗೆ ಕೂಡ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಒಂದು ವಾರ ಗುಡುಗು-ಸಿಡಿಲಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಜೂನ್ 27ರಂದು ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ನಂತರದ ದಿನಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 27 ಮತ್ತು 28ರಂದು ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಜೂನ್ 29ರಂದು ಗ್ರೀನ್ ಅಲರ್ಟ್ ಘೋಷಿಸಲಾಗಿದ್ದು, ಜೂನ್ 30ರಿಂದ ಜುಲೈ 3ರವರೆಗೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಮಳೆ, ಗುಡುಗು ಹಾಗೂ ಸಿಡಿಲಿನ ಮುನ್ಸೂಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ವಿಶೇಷವಾಗಿ ರೈತರು, ಮೀನುಗಾರರು ಹಾಗೂ ಹೊರಾಂಗಣ ಕೆಲಸಗಳಲ್ಲಿ ತೊಡಗಿರುವವರು ಎಚ್ಚರಿಕೆಯಿಂದ ಇರಬೇಕು. ಗುಡುಗು-ಸಿಡಿಲಿನ ವೇಳೆ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಹಾಗೂ ಹಳೆಯ ಅಥವಾ ಶಿಥಿಲಗೊಂಡ ಕಟ್ಟಡಗಳ ಸಮೀಪ ನಿಲ್ಲಬಾರದು ಎಂದು ಇಲಾಖೆ ಸಲಹೆ ನೀಡಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img