HomeHaveriಜಿಲ್ಲಾ ನ್ಯಾಯಾಲಯಗಳ ಮೇಲೆ ಮತ್ತೆ ಬಾಂಬ್ ಭೀತಿ! ಹಾವೇರಿ, ಧಾರವಾಡ, ಕೊಡಗಿನಲ್ಲಿ ಹೈ ಅಲರ್ಟ್ –...

ಜಿಲ್ಲಾ ನ್ಯಾಯಾಲಯಗಳ ಮೇಲೆ ಮತ್ತೆ ಬಾಂಬ್ ಭೀತಿ! ಹಾವೇರಿ, ಧಾರವಾಡ, ಕೊಡಗಿನಲ್ಲಿ ಹೈ ಅಲರ್ಟ್ – ಶಾಲೆಯೂ ಖಾಲಿ

For Dai;y Updates Join Our whatsapp Group

ಹಾವೇರಿ: ಹಾವೇರಿ, ಧಾರವಾಡ ಹಾಗೂ ಕೊಡಗು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ನ್ಯಾಯಾಲಯಗಳ ಜೊತೆಗೆ ಮಡಿಕೇರಿಯ ಕೇಂದ್ರೀಯ ವಿದ್ಯಾಲಯಕ್ಕೂ ಬೆದರಿಕೆ ಸಂದೇಶ ಬಂದಿರುವುದರಿಂದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಎರಡನೇ ಬಾರಿ ಬೆದರಿಕೆ ಸಂದೇಶ ಬಂದ ತಕ್ಷಣ ಕಲಾಪಗಳನ್ನು ಸ್ಥಗಿತಗೊಳಿಸಿ, ನ್ಯಾಯಾಧೀಶರು, ವಕೀಲರು, ಸಿಬ್ಬಂದಿ ಹಾಗೂ ಕಕ್ಷಿದಾರರನ್ನು ಹೊರಗೆ ಸ್ಥಳಾಂತರಿಸಲಾಯಿತು. ಕೋರ್ಟ್ ಆವರಣ, ಕಟ್ಟಡ ಹಾಗೂ ಪಾರ್ಕಿಂಗ್ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ಸಂಪೂರ್ಣ ತಪಾಸಣೆ ನಡೆಸಲಾಗುತ್ತಿದೆ. ದುಷ್ಕರ್ಮಿಗಳು ಮಧ್ಯಾಹ್ನ 2.15ಕ್ಕೆ ಸ್ಫೋಟಿಸುವುದಾಗಿ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇ-ಮೇಲ್ ಕಳುಹಿಸಿದವರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಶನಿವಾರದ ನ್ಯಾಯಾಂಗ ಕಲಾಪಗಳನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಮಡಿಕೇರಿಯ ಕೇಂದ್ರೀಯ ವಿದ್ಯಾಲಯ ಮತ್ತು ಜಿಲ್ಲಾ ನ್ಯಾಯಾಲಯಕ್ಕೂ ಇದೇ ರೀತಿಯ ಬೆದರಿಕೆ ಇ-ಮೇಲ್ ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲಾಯಿತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಶಾಲಾ ಆವರಣದ ಸಂಪೂರ್ಣ ಶೋಧ ನಡೆಸಲಾಗಿದೆ. ಈ ಬೆಳವಣಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಸಿತು.

ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಕಳೆದ ಎಂಟು ದಿನಗಳಲ್ಲಿ ಮೂರನೇ ಬಾರಿ ಬಾಂಬ್ ಬೆದರಿಕೆ ಬಂದಿದೆ. ಈ ಬಾರಿ ‘ಅನ್ನನಾಥಮ್ ಅರಿಯಪ್ಪನ್’ ಹೆಸರಿನಲ್ಲಿ ಕಳುಹಿಸಲಾದ ಇ-ಮೇಲ್‌ನಲ್ಲಿ ಮೂರು ಗಂಟೆಯೊಳಗೆ ಬಾಂಬ್ ಸ್ಫೋಟಿಸುವುದಾಗಿ ಉಲ್ಲೇಖಿಸಲಾಗಿದೆ. ಪ್ರತಿ ಬೆದರಿಕೆ ಸಂದೇಶದ ಬಳಿಕ ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಇತ್ತೀಚಿನ ಪ್ರಕರಣದಲ್ಲೂ ತನಿಖೆ ಮುಂದುವರಿದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img