ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಯಾಗಿದ್ದ ಸುಜಾತಾ ದೊಡ್ಡಮನಿ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದಿಂದ ಶಿರಹಟ್ಟಿ ತಾಲೂಕು ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ಹಾಗೂ ಬ್ರೆಡ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಸೋಮನಗೌಡ ಮರಿಗೌಡ್ರ ಮಾತನಾಡಿ, ಸುಜಾತಾ ದೊಡ್ಡಮನಿ ಅವರು ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನಗಳನ್ನು ತಂದು ಜನಸೇವೆಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಾಲಪ್ಪ ದುಗ್ಗಾಣಿ, ಮಲ್ಲಪ್ಪ ಹುಯಿಲಗೋಳ, ಮರಿಯಪ್ಪ ಸಣ್ಣತಂಗಿಯವರ, ಮಾಬುಸಾಬ ಲಕ್ಷ್ಮೇಶ್ವರ, ಮಂಜುನಾಥ ತಳವಾರ, ಮಹದೇವಗೌಡ ಪಾಟೀಲ, ಫಕ್ಕೀರೇಶ ಬಕ್ಕಸದ, ಫಕ್ಕೀರೇಶ ಕಲ್ಯಾಣಿ, ಸಬ್‌ಜಾನಸಾಬ ಲಕ್ಷ್ಮೇಶ್ವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.



