HomeGadag Newsದುಶ್ಚಟ ಮುಕ್ತ ಸಮಾಜಕ್ಕೆ ವಿದ್ಯಾರ್ಥಿಗಳೇ ಶಕ್ತಿ: ಎಎಸ್‌ಐ ಮೀನಾಕ್ಷಿ ಮಟ್ಟಿ

ದುಶ್ಚಟ ಮುಕ್ತ ಸಮಾಜಕ್ಕೆ ವಿದ್ಯಾರ್ಥಿಗಳೇ ಶಕ್ತಿ: ಎಎಸ್‌ಐ ಮೀನಾಕ್ಷಿ ಮಟ್ಟಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಾದಕ ವಸ್ತುಗಳ ವ್ಯಸನದಿಂದ ಮಕ್ಕಳ ಆರೋಗ್ಯ, ಕುಟುಂಬ ಹಾಗೂ ಸಮಾಜದ ಸ್ವಾಸ್ಥ್ಯ ಹದಗೆಡುತ್ತಿದ್ದು, ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಎಎಸ್‌ಐ ಮೀನಾಕ್ಷಿ ಮಟ್ಟಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು. ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಗಳ ಬಗ್ಗೆ ಅರಿವು ಹೊಂದುವುದು ಅಗತ್ಯ ಎಂದರು.

ಯೋಜನೆಯ ಮೇಲ್ವಿಚಾರಕ ನಿಂಗಪ್ಪ ಪಾಟೀಲ ಮಾತನಾಡಿ, ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮದ್ಯವರ್ಜನ ಶಿಬಿರ, ಜ್ಞಾನ ವಿಕಾಸ ಹಾಗೂ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಬಿ.ಸಿ. ಪಟ್ಟೇದ ಮಾತನಾಡಿ, ಮಕ್ಕಳಲ್ಲಿ ಬಾಲ್ಯದಿಂದಲೇ ದುಶ್ಚಟಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕರು, ಸೇವಾಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

“ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಾದಕ ವ್ಯಸನದಿಂದ ದೂರವಿರುವ ಸಂಕಲ್ಪ ಪ್ರತಿಯೊಬ್ಬರೂ ಮಾಡಬೇಕು.”

– ಮೀನಾಕ್ಷಿ ಮಟ್ಟಿ, ಎಎಸ್‌ಐ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img