HomeKarnataka Newsರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

For Dai;y Updates Join Our whatsapp Group

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ನಿರೀಕ್ಷೆಯಿರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳ ಅನೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದರ ಜೊತೆಗೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದಲ್ಲಿ ಬಿರುಗಾಳಿ ಹಾಗೂ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಮುದ್ರಕ್ಕೆ ತೆರಳುವ ಮೀನುಗಾರರು ಮತ್ತು ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಮನವಿ ಮಾಡಿದೆ. ತಗ್ಗು ಪ್ರದೇಶಗಳ ನಿವಾಸಿಗಳು, ವಾಹನ ಸವಾರರು ಹಾಗೂ ಪ್ರವಾಸಿಗರು ಹವಾಮಾನ ಇಲಾಖೆಯ ಮುಂದಿನ ಮಾಹಿತಿಯನ್ನು ಗಮನಿಸಿ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img