HomeCrime Newsಬೈಕ್ʼಗೆ ಡಿಕ್ಕಿ ಹೊಡೆದ ಕಾರು: ಸ್ಥಳದಲ್ಲೇ ತಂದೆ- ಮಗ ದುರ್ಮರಣ, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ

ಬೈಕ್ʼಗೆ ಡಿಕ್ಕಿ ಹೊಡೆದ ಕಾರು: ಸ್ಥಳದಲ್ಲೇ ತಂದೆ- ಮಗ ದುರ್ಮರಣ, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ

ಶಿರಹಟ್ಟಿ: ತಾಲೂಕಿನ ವರವಿ ಕ್ರಾಸ್ ಸಮೀಪ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ತಂದೆ ಮತ್ತು ಪುತ್ರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಮೃತರನ್ನು ಶಿರಹಟ್ಟಿ ಪಟ್ಟಣದ ದುರಗಪ್ಪ ಮೋಡಕೇರ (38) ಹಾಗೂ ಅವರ 14 ವರ್ಷದ ಪುತ್ರ ಮೈಲಾರಿ ಮೋಡಕೇರ ಎಂದು ಗುರುತಿಸಲಾಗಿದೆ.

ಭಾನುವಾರ ಬೆಳಿಗ್ಗೆ ದುರಗಪ್ಪ ಅವರು ಪುತ್ರನೊಂದಿಗೆ ಬೈಕ್‌ನಲ್ಲಿ ಶಿರಹಟ್ಟಿಯಿಂದ ಬೆಳ್ಳಟ್ಟಿ ಕಡೆಗೆ ತೆರಳುತ್ತಿದ್ದ ವೇಳೆ, ಶಿವಮೊಗ್ಗದಿಂದ ಗದಗ ಕಡೆಗೆ ಬರುತ್ತಿದ್ದ ಐ-20 ಕಾರು ವರವಿ ಕ್ರಾಸ್ ಬಳಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತಂದೆ-ಮಗ ಇಬ್ಬರೂ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಗದಗ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಶಿರಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img