HomeGadag Newsಕುಟುಂಬ ಕಲಹದ ಬೆನ್ನಲ್ಲೇ ಮೊಬೈಲ್ ಟವರ್ ಏರಿದ ವ್ಯಕ್ತಿ..!

ಕುಟುಂಬ ಕಲಹದ ಬೆನ್ನಲ್ಲೇ ಮೊಬೈಲ್ ಟವರ್ ಏರಿದ ವ್ಯಕ್ತಿ..!

For Dai;y Updates Join Our whatsapp Group

ಗದಗ: ಕುಟುಂಬ ಕಲಹದ ಹಿನ್ನೆಲೆಯಲ್ಲಿ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಗ್ರಾಮದ ನಜೀರ್ ಸಾಬ್ ಎಂಬಾತ ಈ ಕೃತ್ಯ ಎಸಗಿದ ವ್ಯಕ್ತಿ.

ಸೋಮವಾರ ಮಧ್ಯಾಹ್ನ ಮದ್ಯದ ಅಮಲಿನಲ್ಲಿ
ಮನನೊಂದ ನಜೀರ್ ಸಾಬ್ ನೇರವಾಗಿ ಗ್ರಾಮದ ಮೊಬೈಲ್ ಟವರ್ ಏರಿ ಹೈಡ್ರಾಮಾ ನಡೆಸಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮುಂಡರಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಕಾರ್ಯಾಚರಣೆ ಆರಂಭಿಸಿದರು. ಸುಮಾರು ಸಮಯ ಮನವೊಲಿಕೆ ನಡೆಸಿದ ಬಳಿಕ ನಜೀರ್ ಸಾಬ್‌ನನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.

ಕಾರ್ಯಾಚರಣೆ ವೇಳೆ ಕೆಲಕಾಲ ಹುಚ್ಚಾಟ ಮೆರೆದ ನಜೀರ್ ಸಾಬ್‌ನ್ನು ಕೊನೆಗೆ ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img