ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರಸಭೆಯ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕೆಲಸಗಾರರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಗರಸಭೆ ಆವರಣದಲ್ಲಿ ಆಯೋಜಿಸಲಾಯಿತು.
ಗದಗ-ಬೆಟಗೇರಿ ನಗರಸಭೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರಸಭೆಯ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕೆಲಸಗಾರರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಗರಸಭೆ ಆವರಣದಲ್ಲಿ ಆಯೋಜಿಸಲಾಯಿತು.
ಶಿಬಿರದಲ್ಲಿ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಬಾಯಿ ಕ್ಯಾನ್ಸರ್, ಮೆದುಳು ಆರೋಗ್ಯ ಹಾಗೂ ಹೃದಯ ಸಂಬಂಧಿತ ಕಾಯಿಲೆಗಳ ತಪಾಸಣೆಯನ್ನು ನುರಿತ ವೈದ್ಯರು ನಡೆಸಿ ಅಗತ್ಯ ಆರೋಗ್ಯ ಸಲಹೆಗಳನ್ನು ನೀಡಿದರು. ಸ್ವಚ್ಛತಾ ಕಾರ್ಯದಲ್ಲಿ ನಿರಂತರ ತೊಡಗಿರುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಗೋಪಾಲ್, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಆನಂದ ಬದಿ, ಕಂದಾಯ ಅಧಿಕಾರಿ ಮಹೇಶ್ ಹಡಪದ, ಜಿಲ್ಲಾ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಹೇಮೇಶ್ ಯಟ್ಟಿ, ಆರೋಗ್ಯ ಇಲಾಖೆಯ ಸಿಬ್ಬಂದಿ, ಕಮ್ಯುನಿಟಿ ಮೊಬೈಲೈಜರ್‌ಗಳು, ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕೆಲಸಗಾರರು ಉಪಸ್ಥಿತರಿದ್ದರು.
“ನಗರದ ಸ್ವಚ್ಛತೆಯ ಹೊಣೆ ಹೊತ್ತಿರುವ ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೂ ನಗರಸಭೆ ಸಮಾನ ಆದ್ಯತೆ ನೀಡುತ್ತಿದೆ. ಇಂತಹ ಆರೋಗ್ಯ ತಪಾಸಣಾ ಶಿಬಿರಗಳು ಅವರ ಆರೋಗ್ಯ ಕಾಪಾಡಲು ಸಹಕಾರಿಯಾಗಲಿವೆ.”
ರಾಜಾರಾಮ ಪವಾರ್, ಪೌರಾಯುಕ್ತರು, ಗದಗ-ಬೆಟಗೇರಿ ನಗರಸಭೆ



