HomeKarnataka Newsನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್!

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್!

For Dai;y Updates Join Our whatsapp Group

ಧಾರವಾಡ: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ ಪ್ರಮುಖ ಆರೋಪಿ ಫಯಾಜ್‌ಗೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠದಿಂದ ಮತ್ತೆ ಹಿನ್ನಡೆಯಾಗಿದೆ.

ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ.

ಈ ಹಿಂದೆ ಹುಬ್ಬಳ್ಳಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವೂ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ಆರೋಪಿ, ಜಾಮೀನು ನೀಡುವಂತೆ ಕೋರಿದ್ದನು.

ಪ್ರಕರಣಕ್ಕೆ ಸಂಬಂಧಿಸಿದಂತೆ ಉಭಯಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಆರೋಪಿಗೆ ಜಾಮೀನು ನೀಡಲು ಯಾವುದೇ ಆಧಾರಗಳಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.

ಮೃತ ನೇಹಾ ಹಿರೇಮಠ ಪರವಾಗಿ ಹಿರಿಯ ವಕೀಲ ರಾಘವೇಂದ್ರ ಮುತ್ತಗಿ ವಾದ ಮಂಡಿಸಿ, ಆರೋಪಿ ಎಸಗಿರುವ ಕೃತ್ಯ ಅತ್ಯಂತ ಕ್ರೂರವಾಗಿದ್ದು, ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುವುದರ ಜೊತೆಗೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆಯೂ ಇದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಈ ವಾದವನ್ನು ಪರಿಗಣಿಸಿದ ನ್ಯಾಯಪೀಠ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು.

ಪ್ರಕರಣದ ತನಿಖೆಯನ್ನು ಸಿಐಡಿ ಮುಂದುವರಿಸಿದ್ದು, ಹೈಕೋರ್ಟ್‌ನ ಈ ಆದೇಶವು ನೇಹಾ ಕುಟುಂಬದ ಕಾನೂನು ಹೋರಾಟಕ್ಕೆ ಮಹತ್ವದ ಬೆಂಬಲವಾಗಿದೆ.

ಪ್ರಕರಣದ ಹಿನ್ನೆಲೆ:

2024ರ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ಹಾಗೂ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರನ್ನು ಆರೋಪಿ ಫಯಾಜ್ ಚಾಕುವಿನಿಂದ ಹಲವು ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದನು. ಪ್ರೀತಿಯನ್ನು ನಿರಾಕರಿಸಿದ್ದೇ ಕೊಲೆಗೆ ಕಾರಣ ಎಂದು ತನಿಖೆಯಲ್ಲಿ ತಿಳಿದುಬಂದಿತ್ತು.

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿದ್ದರು. ಹತ್ಯೆ ಪ್ರಕರಣದ ವಿಚಾರಣೆ ಮುಂದುವರಿದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img