ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಹೆಂಡತಿಯನ್ನು ಪತಿ ಕತ್ತು ಹಿಸುಕಿ ಕೊಲೆ ಮಾಡಿದ ಭೀಕರ ಘಟನೆ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕ್ ಕಮಲಾಕರ್ (29) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಸವರಾಜ್ ವಡ್ಡರ್ ಎಂದು ಪೊಲೀಸರು ತಿಳಿಸಿದ್ದಾರೆ.
2024 ರಲ್ಲಿ ಪ್ರಿಯಾಂಕ್ಳನ್ನ ಮದುವೆಯಾಗಿದ್ದ ಬಸವರಾಜ್ ಮದುವೆಯಾದ ಒಂದೇ ವರ್ಷದಲ್ಲಿ ಬಂಗಾರ ತರುವಂತೆ ಕಿರುಕುಳ ನೀಡುತಿದ್ದ. ತವರು ಮನೆಯಿಂದ ಬಂಗಾರ, ಹಣ ತರುವಂತೆ ಕಿರುಕುಳ ನೀಡಿದ್ದಲ್ಲದೇ ನೀನು ದಪ್ಪ ಇದ್ದಿ, ಗರ್ಭಿಣಿ ಆಗಲ್ಲ ಅಂತ ಕೊಲೆಗೈದಿದ್ದಾನೆ.
ಈ ಘಟನೆ ಜೂನ್ 29ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೃತೆಯ ಪೋಷಕರು ಈ ಮಾಹಿತಿ ತಿಳಿದು ಕಲಬುರಗಿಯಿಂದ ನವಲಗುಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಈ ಪ್ರಕರಣ ಸಂಬಂಧ ಬಸವರಾಜ್ ಸೇರಿದಂತೆ ರೇಣವ್ವ, ಸುಭಾಷ್ ಮತ್ತು ಸಿದ್ದರಾಮೇಶ್ ಅವರನ್ನು ಕೂಡ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.



