HomeGadag Newsಪರಿಸರ ಸಂರಕ್ಷಣೆಗೆ ಹಸಿರು ಸಂಕಲ್ಪ

ಪರಿಸರ ಸಂರಕ್ಷಣೆಗೆ ಹಸಿರು ಸಂಕಲ್ಪ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಗಾರಿಕೆ ಎಂಬ ಸಂದೇಶ ಸಾರುವ ಉದ್ದೇಶದಿಂದ ಗದಗ-ಬೆಟಗೇರಿ ರೋಟರಿ ಕ್ಲಬ್ ಹಾಗೂ ಗದಗ-ಬೆಟಗೇರಿ ಇನ್ನರ್‌ವ್ಹೀಲ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬುಧವಾರ ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ರೋಟರಿ 3170ರ ಸಹಾಯಕ ಜಿಲ್ಲಾ ಗವರ್ನರ್ ಶ್ರೀಧರಗೌಡ ಎ. ಧರ್ಮಾಯತ, ಗದಗ-ಬೆಟಗೇರಿ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷ ಡಾ. ಪ್ರದೀಪ ಉಗಲಾಟ, ಕಾರ್ಯದರ್ಶಿ ಅಕ್ಷಯ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಡಾ. ಆರ್.ಜಿ. ಗಚ್ಚಿನಮಠ, ನಿಕಟಪೂರ್ವ ಕಾರ್ಯದರ್ಶಿ ಸುರೇಶ ಕುಂಬಾರ, ಶ್ರೀಧರ ಸುಲ್ತಾನಪೂರ, ಡಾ. ಆರ್.ಬಿ. ಉಪ್ಪಿನ ಹಾಗೂ ವಿಶ್ವನಾಥ ಯಳಮಲಿ ಭಾಗವಹಿಸಿ ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.

ಗದಗ-ಬೆಟಗೇರಿ ಇನ್ನರ್‌ವ್ಹೀಲ್ ಕ್ಲಬ್‌ನ ಮಂಜುಳಾ ಅಕ್ಕಿ, ಅಶ್ವಿನಿ ಜಗತಾಪ, ಶಿವಲೀಲಾ ಅಕ್ಕಿ, ಸುಶೀಲಾ ಕೋಟಿ, ನೀಲಾಂಭಿಕಾ ಉಗಲಾಟ, ಸವಿತಾ ಧರ್ಮಾಯತ, ಸಂಧ್ಯಾ ಕೋಟಿ, ಶಿಲ್ಪಾ ಅಕ್ಕಿ, ಪುಷ್ಪಾ ಭಂಡಾರಿ, ಮೀನಾಕ್ಷಿ ಕೊರವನವರ, ಸುವರ್ಣಾ ವಸ್ತ್ರದ, ವೀಣಾ ಕಾವೇರಿ ಸೇರಿದಂತೆ ರೋಟ್ರಾಕ್ಟ್ ಕ್ಲಬ್‌ನ ಸನ್ಮತಿ, ಸುಮಾ, ಭಾನುಪ್ರಕಾಶ ಹಾಗೂ ಶ್ರುಜನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಗೆ ಸಸಿ ನೆಡುವುದಷ್ಟೇ ಅಲ್ಲ, ಅವುಗಳನ್ನು ಪೋಷಿಸಿ ಬೆಳೆಸುವ ಜವಾಬ್ದಾರಿಯನ್ನೂ ಪ್ರತಿಯೊಬ್ಬರೂ ವಹಿಸಬೇಕು ಎಂದು ಕರೆ ನೀಡಲಾಯಿತು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img