HomeGadag Newsಸಹಕಾರದ ಸಂಭ್ರಮಕ್ಕೆ ಆರೋಗ್ಯದ ಸ್ಪರ್ಶ

ಸಹಕಾರದ ಸಂಭ್ರಮಕ್ಕೆ ಆರೋಗ್ಯದ ಸ್ಪರ್ಶ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯ ಐದನೇ ವರ್ಷದ ಸಂಭ್ರಮದ ಅಂಗವಾಗಿ ಲಕ್ಷ್ಮೇಶ್ವರದಲ್ಲಿ ಮಂಗಳವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಹಕಾರಿಗಳು ಹಾಗೂ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಸುಮಾರು 100ಕ್ಕೂ ಅಧಿಕ ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಶಿಬಿರದ ಸದುಪಯೋಗ ಪಡೆದುಕೊಂಡರು.

ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳ ನಿ., ಬೆಂಗಳೂರು, ಗದಗ ಜಿಲ್ಲಾ ಸಹಕಾರಿ ಯೂನಿಯನ್, ಸಹಕಾರ ಇಲಾಖೆ, ಧಾರವಾಡ ಜಿಲ್ಲಾ ಕೇಂದ್ರ ಸಹಕಾರಿ (ಕೆಸಿಸಿ) ಬ್ಯಾಂಕ್, ಕೆಎಂಎಫ್ ಧಾರವಾಡ, ಲಕ್ಷ್ಮೇಶ್ವರ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ (ಟಿಎಪಿಸಿಎಂಎಸ್) ಹಾಗೂ ತಾಲೂಕಿನ ವಿವಿಧ ಸಹಕಾರಿ ಸಂಘಗಳು ಮತ್ತು ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ ಈ ಶಿಬಿರ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಟಿಎಪಿಸಿಎಂಎಸ್ ಅಧ್ಯಕ್ಷ ಸೋಮೇಶ ಉಪನಾಳ, ಸಹಕಾರಿ ಸಂಸ್ಥೆಗಳು ಕೇವಲ ಆರ್ಥಿಕ ಚಟುವಟಿಕೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರ ಆರೋಗ್ಯ ಮತ್ತು ಕಲ್ಯಾಣಕ್ಕೂ ಆದ್ಯತೆ ನೀಡುತ್ತಿವೆ. ಉಚಿತ ಆರೋಗ್ಯ ಶಿಬಿರಗಳು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಆರಂಭಿಕ ಹಂತದಲ್ಲೇ ಕಾಯಿಲೆಗಳನ್ನು ಪತ್ತೆಹಚ್ಚಲು ನೆರವಾಗುತ್ತವೆ. ಸಹಕಾರ ಸಂಘಗಳ ಸದಸ್ಯರು ಯಶಸ್ವಿನಿ ಆರೋಗ್ಯ ಯೋಜನೆಯ ಸೌಲಭ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶಿಬಿರದಲ್ಲಿ ಡಾ. ಪ್ರಿಯಾಂಕ ನೇತೃತ್ವದಲ್ಲಿ ಆರೋಗ್ಯ ತಪಾಸಣೆ ನಡೆಸಿ, ಸಾರ್ವಜನಿಕರಿಗೆ ಅಗತ್ಯ ವೈದ್ಯಕೀಯ ಸಲಹೆ ಹಾಗೂ ಮಾರ್ಗದರ್ಶನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಟಿಎಪಿಸಿಎಂಎಸ್ ಉಪಾಧ್ಯಕ್ಷ ಶೇಖಣ್ಣ ಕಾಳೆ, ಹಿರಿಯ ಸಹಕಾರಿಗಳಾದ ಗದಿಗೆಪ್ಪ ಯತ್ನಳ್ಳಿ, ನಿರ್ದೇಶಕರಾದ ವಿರುಪಾಕ್ಷಪ್ಪ ಪಡಿಗೇರಿ, ಜಯಮ್ಮ ಕಳ್ಳಿ, ಈರಣ್ಣ ಮುಳಗುಂದ, ರತ್ನಾ ಗುಂಜಳ, ಬಸವರಾಜ ವಾಲಿಕಾರ, ಸುರೇಶ ಬಂಕಾಪೂರ, ಹಿರಿಯರಾದ ಚಂಬಣ್ಣ ಬಾಳಿಕಾಯಿ, ಪ್ಯಾಕ್ಸ್ ಅಧ್ಯಕ್ಷ ವಿಜಯ ಮೆಕ್ಕಿ, ತಾಲೂಕಿನ ವಿವಿಧ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರು ಉಪಸ್ಥಿತರಿದ್ದರು.

ಕೆಸಿಸಿ ಬ್ಯಾಂಕ್ ನಿರ್ದೇಶಕ ಜಿ.ವಿ. ಪಾಟೀಲ, ಗದಗ ಜಿಲ್ಲಾ ಸಹಕಾರಿ ಯೂನಿಯನ್‌ನ ಚಂದ್ರಶೇಖರ ಕರಿಯಪ್ಪನವರ, ರವಿ ಕಲ್ಲನಗೌಡ್ರ, ಕೆ.ಸಿ. ಕೂಸನೂರಮಠ, ಶಾಂತ ಚಂದ್ರಮ್ಮ ಹಿರೇಮಠ ಸೇರಿದಂತೆ ವಿವಿಧ ಸಹಕಾರಿ ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

“ಸಹಕಾರಿ ಸಂಸ್ಥೆಗಳು ಆರ್ಥಿಕ ಸೇವೆಯ ಜೊತೆಗೆ ಜನರ ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣಕ್ಕೂ ಆದ್ಯತೆ ನೀಡಬೇಕು.”

ಸೋಮೇಶ ಉಪನಾಳ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img