ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಪಟ್ಟಣದ ಎಂಜಿಎಂ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕಿ ದೀಪಾಲಿ ಪಾಟೀಲ ಅವರ ನೇತೃತ್ವದಲ್ಲಿ ಅಗಡಿ ಸನ್ ರೈಸ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಗೆ ಶುಭಾಶಯ ಕೋರಿದರು.
ಈ ವೇಳೆ ವಿದ್ಯಾರ್ಥಿಗಳು ವೈದ್ಯರೊಂದಿಗೆ ಕೇಕ್ ಕತ್ತರಿಸಿ ವೈದ್ಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಸಮಾಜದ ಆರೋಗ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅಮೂಲ್ಯವಾಗಿದೆ ಎಂದು ಅಭಿನಂದಿಸಿದರು.
ಆಸ್ಪತ್ರೆಯ ವೈದ್ಯರು ಮಕ್ಕಳ ಶುಭಾಶಯವನ್ನು ಸ್ವೀಕರಿಸಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು, ಸ್ವಚ್ಛತೆ ಪಾಲಿಸುವುದು ಹಾಗೂ ಉತ್ತಮ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಅಗಡಿ ಸನ್ ರೈಸ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ, ಎಂಜಿಎಂ ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ದೀಪಾಲಿ ಪಾಟೀಲ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



