HomeBengaluru NewsKEA ಮಹತ್ವದ ಪ್ರಕಟಣೆ: PGCET-2026 ಅರ್ಜಿ ಸರಿಪಡಿಸಲು ಅಂತಿಮ ಅವಕಾಶ!

KEA ಮಹತ್ವದ ಪ್ರಕಟಣೆ: PGCET-2026 ಅರ್ಜಿ ಸರಿಪಡಿಸಲು ಅಂತಿಮ ಅವಕಾಶ!

For Dai;y Updates Join Our whatsapp Group

ಬೆಂಗಳೂರು: ಪಿಜಿಸಿಇಟಿ-2026 ಅರ್ಜಿಯಲ್ಲಿ ದಾಖಲಿಸಿರುವ ಮಾಹಿತಿಯ ತಿದ್ದುಪಡಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಂತಿಮ ಅವಕಾಶ ನೀಡಿದೆ.

KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ನೀಡಿರುವ ಮಾಹಿತಿಯ ಪ್ರಕಾರ, ಅಭ್ಯರ್ಥಿಗಳು ಜುಲೈ 3ರಿಂದ 6ರವರೆಗೆ ತಮ್ಮ ಅರ್ಜಿಯಲ್ಲಿ ಇರುವ ವಿವರಗಳನ್ನು ತಿದ್ದುಪಡಿ ಮಾಡಿಕೊಳ್ಳಬಹುದು. ಈ ಸಂದರ್ಭದಲ್ಲಿ ಅರ್ಜಿಯಲ್ಲಿನ ಎಲ್ಲಾ ವಿವರಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ ನಂತರವೇ ತಿದ್ದುಪಡಿ ಮಾಡಲು ಸೂಚಿಸಲಾಗಿದೆ. ಜೊತೆಗೆ ಮೀಸಲಾತಿ ವಿವರಗಳನ್ನು ಸಹ ತಪ್ಪದೇ ಪರಿಶೀಲಿಸಬೇಕು ಎಂದು ತಿಳಿಸಲಾಗಿದೆ.

ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕಿಟೆಕ್ಚರ್ ಕೋರ್ಸುಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಈ ಅವಕಾಶ ಅನ್ವಯವಾಗಲಿದೆ.

ಇದೇ ವೇಳೆ, ಎಂ.ಇ/ಎಂ.ಟೆಕ್ ಕೋರ್ಸುಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಜುಲೈ 10ರಂದು ಬೆಳಿಗ್ಗೆ 10:30ರಿಂದ ಸಂಜೆ 4ರೊಳಗೆ ಮೂಲ ದಾಖಲೆಗಳ ಪರಿಶೀಲನೆಗೆ ಖುದ್ದಾಗಿ ಹಾಜರಾಗಬೇಕು ಎಂದು KEA ಸೂಚಿಸಿದೆ.

ಅಭ್ಯರ್ಥಿಗಳು ಪದವಿ ಪರೀಕ್ಷೆಯ ಎಲ್ಲಾ ಸೆಮಿಸ್ಟರ್/ವರ್ಷಗಳ ಅಂಕಪಟ್ಟಿಗಳು, KEA ಆನ್‌ಲೈನ್ ಅರ್ಜಿ ಪ್ರತಿ, ಗುರುತು ಚೀಟಿ ಹಾಗೂ ಇತರೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ತರಬೇಕು. ಪರಿಶೀಲನೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಮಾತ್ರ ನಿಯಮಾನುಸಾರ ರ್ಯಾಂಕಿಂಗ್ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಜೈವಿಕ ತಂತ್ರಜ್ಞಾನ, ಕೆಮಿಕಲ್ ಎಂಜಿನಿಯರಿಂಗ್, ಎನ್ವಿರಾನ್‌ಮೆಂಟಲ್ ಎಂಜಿನಿಯರಿಂಗ್, ಪಾಲಿಮರ್ ಸೈನ್ಸ್, ಜವಳಿ ತಂತ್ರಜ್ಞಾನ ಹಾಗೂ ಆರ್ಕಿಟೆಕ್ಚರ್ ಕೋರ್ಸುಗಳಿಗೆ ಈ ನಿಯಮ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img