ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಕರಾವಳಿ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅಂಗನವಾಡಿಯಿಂದ ದ್ವಿತೀಯ ಪಿಯುಸಿ ವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಆದೇಶ ಹೊರಡಿಸಿದ್ದಾರೆ.
ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ತರಗತಿ ನಡೆಸುವುದು ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಹಾಗೂ ಅನಗತ್ಯ ಸಂಚಾರವನ್ನು ತಪ್ಪಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.



